ಮನೆ ಉದ್ಯೋಗ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

0

ರಾಮನಗರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯ  ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವ  ಸೇವೆಯ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

Join Our Whatsapp Group

ಕನಕಪುರ ತಾಲ್ಲೂಕಿನಲ್ಲಿ ಕಾರ್ಯಕರ್ತೆಯರು-20, ಸಹಾಯಕಿಯರು-35, ಚನ್ನಪಟ್ಟಣ ತಾಲ್ಲೂಕಿನಲ್ಲಿ ಕಾರ್ಯಕರ್ತೆಯರು-14, ಸಹಾಯಕಿಯರು-29, ಮಾಗಡಿ ತಾಲ್ಲೂಕಿನಲ್ಲಿ ಕಾರ್ಯಕರ್ತೆಯರು-17, ಸಹಾಯಕಿಯರು-35, ರಾಮನಗರ ತಾಲ್ಲೂಕಿನಲ್ಲಿ ಕಾರ್ಯಕರ್ತೆಯರು-11, ಸಹಾಯಕಿಯರು-21, ಹಾರೋಹಳ್ಳಿ ಕಾರ್ಯಕರ್ತೆಯರು-8, ಸಹಾಯಕಿಯರು-16 ಹುದ್ದೆಗಳಂತೆ ರಾಮನಗರ ಜಿಲ್ಲೆಯಲ್ಲಿ ಒಟ್ಟು 80 ಕಾರ್ಯಕರ್ತೆ ಹಾಗೂ 137 ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಸ್ಥಳೀಯರು ಇಲಾಖೆಯ ವೆಬ್‌ಸೈಟ್ ವಿಳಾಸ https://karnemakaone.kar.nic.in/abcd/ಮೂಲಕ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇದೇ ಸೆಪ್ಟೆಂಬರ್ 30ರ ಸಂಜೆ 5.30ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ ಸೈಟ್ ಹಾಗೂ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.