ಮನೆ ಉದ್ಯೋಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹುದ್ದೆಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹುದ್ದೆಗೆ ಅರ್ಜಿ ಆಹ್ವಾನ

0

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ವೆಬ್ ​ಸೈಟ್ nhai.gov.in​  ಗೆ ಭೇಟಿ ನೀಡುವ ಮೂಲಕ ಆನ್​ ಲೈನ್​ನಲ್ಲೇ ಅರ್ಜಿ ಸಲ್ಲಿಸಬಹುದು. ಹಾಗೆಯೇ ಆಫ್ ​ಲೈನ್​ನಲ್ಲೂ ಅರ್ಜಿ ಕಳುಹಿಸಲು ಅವಕಾಶ ನೀಡಲಾಗಿದೆ.

Join Our Whatsapp Group

ಹುದ್ದೆಗಳ ವಿವರಗಳು:

ಸಂಸ್ಥೆಯ ಹೆಸರು : ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ ( NHAI )

ಹುದ್ದೆಗಳ ಸಂಖ್ಯೆ: 1

ಉದ್ಯೋಗ ಸ್ಥಳ: ಅಖಿಲ ಭಾರತ

ಹುದ್ದೆಯ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್ (ಮೀಡಿಯಾ ರಿಲೇಷನ್)

ಶೈಕ್ಷಣಿಕ ಅರ್ಹತೆ:

NHAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ/ಸಾರ್ವಜನಿಕ ಸಂಬಂಧಗಳಲ್ಲಿ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳನ್ನು ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.78800 ರಿಂದ ರೂ. 209200/- ರವರೆಗೆ ಮಾಸಿಕ ವೇತನ ಸಿಗಲಿದೆ.

ಪ್ರಮುಖ ದಿನಾಂಕಗಳು:

ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-08-2023

ಅರ್ಜಿ ಕಳುಹಿಸಬೇಕಾದ ವಿಳಾಸ:

GM (HR & Admn)-III, National Highways Authority of India, Plot No.G5-&6, Sector-10, Dwarka, New Delhi-110075

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.