ಮನೆ ಉದ್ಯೋಗ ಕೃಷಿ ವಿದ್ಯಾಲಯಗಳಲ್ಲಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕೃಷಿ ವಿದ್ಯಾಲಯಗಳಲ್ಲಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

0

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದಲ್ಲಿ ಐದು ಕೃಷಿ ವಿವಿಗಳಿದ್ದು ವಿದ್ಯಾರ್ಥಿಗಳು ಬಯಸಿದ ವಿವಿಗಳಲ್ಲಿ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

Join Our Whatsapp Group

ಈ ವಿವಿಗಳಲ್ಲಿ ಕಲಿಕೆಗಿದೆ ಅವಕಾಶ:

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ- ಶಿವಮೊಗ್ಗ

ಕೃಷಿ ವಿಶ್ವವಿದ್ಯಾಲಯ- ಬೆಂಗಳೂರು

ಕೃಷಿ ವಿಶ್ವವಿದ್ಯಾಲಯ- ಧಾರವಾಡ

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ- ರಾಯಚೂರು

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ- ಬಾಗಲಕೋಟೆ

ಸ್ನಾತಕೋತ್ತರ ಪದವಿ 4 ಸೆಮ್​ಗಳ ಎರಡು ವರ್ಷದ ಅವಧಿಯದ್ದಾಗಿದೆ. ಇದರ ಜೊತೆಗೆ ಡಾಕ್ಟರಲ್​ ಪದವಿಗೆ ದಾಖಲಾತಿ ಬಯಸುವವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಪ್ರವೇಶಾತಿಗೆ ನ್ಯಾಷನಲ್​ ಟೆಸ್ಟಿಂಗ್​ ಏಜೆನ್ಸಿಯ ಅಂಕಗಳು ಕಡ್ಡಾಯ.

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 2,500 ರೂ ಅರ್ಜಿ ಶುಲ್ಕ ಪಾವತಿ ಮಾಡಬೇಕಿದೆ. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 1,250 ರೂ ದರ ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಸೆಪ್ಟೆಂಬರ್​ 9. ಈ ಸಂಬಂಧ ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://pg.admission.kar.nic.in ಅಥವಾ ವಿದ್ಯಾರ್ಥಿಗಳು ಪ್ರವೇಶ ಬಯಸುವ ವಿಶ್ವವಿದ್ಯಾಲಯಗಳ ಅಧಿಕೃತ ಅಂತರ್ಜಾಲ ತಾಣಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.