ಮನೆ ಉದ್ಯೋಗ ಚಿಕ್ಕಬಳ್ಳಾಪುರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

0

ಬೆಂಗಳೂರು: ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 6ನೇ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 285 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

Join Our Whatsapp Group

ಹುದ್ದೆ ವಿವರ:

ಅಂಗನವಾಡಿ ಕಾರ್ಯಕರ್ತರು – 54

ಮಿನಿ ಅಂಗನವಾಡಿ ಕಾರ್ಯಕರ್ತೆಯರು – 14

ಅಂಗನವಾಡಿ ಸಹಾಯಕಿರು – 217

ಯಾವ ತಾಲೂಕಿನಲ್ಲಿ ಎಷ್ಟು ಎಷ್ಟು ಹುದ್ದೆ

ಬಾಗೇಪಲ್ಲಿ: ಅಂಗನಾಡಿ ಕಾರ್ಯಕರ್ತೆಯರು – 8, ಮಿನಿ ಕಾರ್ಯಕರ್ತೆಯರು – 3, ಸಹಾಯಕಿಯರು – 24

ಚಿಕ್ಕಬಳ್ಳಾಪುರ ತಾಲೂಕು: ಕಾರ್ಯಕರ್ತೆಯರು – 8, ಮಿನಿ ಕಾರ್ಯಕರ್ತೆಯರು – 2, ಸಹಾಯಕಿಯರು – 43.

ಚಿಂತಾಮಣಿ ತಾಲೂಕು: ಕಾರ್ಯಕರ್ತೆಯರು – 11, ಮಿನಿ ಕಾರ್ಯಕರ್ತೆಯರು- 22, ಸಹಾಯಕಿಯರು – 2.

ಗುಡಿಬಂಡೆ ತಾಲೂಕು: ಕಾರ್ಯಕರ್ತೆಯರು – 2, ಸಹಾಯಕಿಯರು – 12,

ಶಿಡ್ಲಘಟ್ಟ ತಾಲೂಕು: ಕಾರ್ಯಕರ್ತೆಯರು – 3, ಮಿನಿ ಕಾರ್ಯಕರ್ತೆಯರು – 1, ಸಹಾಯಕಿಯರು 39.

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ವ್ಯಾಸಂಗ ಪೂರ್ಣಗೊಳಿಸಿರಬೇಕು.

ಅಂಗನಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 19 ರಿಂದ 35 ವರ್ಷದ ವಯೋಮಿತಿ ಹೊಂದಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆ ಪರಿಶೀಲಿಸಿ ಆನ್​ಲೈನ್​ ಮೂಲಕ ಅರ್ಜಿ ಭರ್ತಿಗೆ ಮುಂದಾಗುವಂತೆ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಅಕ್ಟೋಬರ್​ 19 ಆಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಅಭ್ಯರ್ಥಿಗಳು ಈ ಜಾಲತಾಣದ http://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.