ಮನೆ ರಾಜಕೀಯ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್​

ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್​

0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅಂದರೆ ಜೂನ್ 16ರಿಂದ ಆನ್ ​ಲೈನ್, ಆಫ್ ​ಲೈನ್ ​ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಘೋಷಣೆ ಮಾಡಿದ್ದಾರೆ.

Join Our Whatsapp Group

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರು ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್​, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್​ ಮಾಹಿತಿ ನೀಡಬೇಕು. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು.

ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

ಹಿಂದಿನ ಲೇಖನಪಂಕ್ಚರ್ ಆಗಿದ್ದ ಕೆಎಸ್ ಆರ್ ಟಿಸಿ ಬಸ್‌ ನಿಂದ ಕೆಳಗಿಳಿದ ಮಹಿಳೆಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಸಾವು
ಮುಂದಿನ ಲೇಖನಭಾರತದಲ್ಲಿ ಫೇಸ್‌ ಬುಕ್‌ ಬಂದ್ ಮಾಡಿಬಿಡಬೇಕಾಗುತ್ತೆ: ಎಚ್ಚರಿಕೆ ನೀಡಿದ ಹೈಕೋರ್ಟ್