ಮನೆ ಉದ್ಯೋಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್​ ಮಿಷನ್​ ಯೋಜನೆಯಡಿ ಕಾರ್ಯ ನಿರ್ವಹಣೆಗೆ...

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್​ ಮಿಷನ್​ ಯೋಜನೆಯಡಿ ಕಾರ್ಯ ನಿರ್ವಹಣೆಗೆ ಹುದ್ದೆಗೆ  ಅರ್ಜಿ ಆಹ್ವಾನ

0

ಬೆಂಗಳೂರು: ಶಿವಮೊಗ್ಗ ಜಿಲ್ಲಾ ವ್ಯಾಪ್ತಿ ವಿಭಾಗದಲ್ಲಿ ಖಾಲಿ ಇರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್​ ಮಿಷನ್​ ಯೋಜನೆಯಡಿ ಕಾರ್ಯ ನಿರ್ವಹಣೆಗೆ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.

Join Our Whatsapp Group

ಹುದ್ದೆ ವಿವರ: ಜಿಲ್ಲಾ ಎಂಐಎಸ್​ ಸಮಾಲೋಕಚರು

ವಿದ್ಯಾರ್ಹತೆ: ಅಭ್ಯರ್ಥಿಗಳು ಸಂಖ್ಯಾಶಾಸ್ತ್ರ, ಎಂಸಿಎ, ಎಂಎಸ್ಸಿ ಕಂಪ್ಯೂಟರ್​ ಸೈನ್ಸ್​, ಬಿಇ ಕಂಪ್ಯೂಟರ್​ ಸೈನ್ಸ್​ ಪದವಿಯನ್ನು ಪಡೆದಿರಬೇಕು.

ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ 3 ವರ್ಷ ಹುದ್ದೆ ನಿರ್ವಹಣೆ ಮಾಡಿರುವ ಅನುಭವ ಹೊಂದಿರಬೇಕು.

ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್​ ಟೈಪಿಂಗ್​ ಜ್ಞಾನವನ್ನು ಹೊಂದಿರಬೇಕು.

ಈ ಹುದ್ದೆಗಳನ್ನು ಒಂದು ವರ್ಷದ ಗುತ್ತಿಗೆ ಅವಧಿಗೆ ಮಾತ್ರ ನೇಮಕಾತಿ ಮಾಡಲಾಗುತ್ತಿದ್ದು, ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆ ಮಾಡಲಾಗುವುದು.

ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆಗೆ ಅಕ್ಟೋಬರ್​ 18ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 1 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು shimoga.nic.in ಭೇಟಿ ನೀಡಬಹುದು.

ಕೆಹೆಚ್​ಪಿಟಿಯಲ್ಲಿ ನರ್ಸಿಂಗ್​ ಹುದ್ದೆ:

ಕರ್ನಾಟಕ ಹೆಲ್ತ್​ ಪ್ರೊಮೊಷನ್​​ ಟ್ರಸ್ಟ್​ನಲ್ಲಿ ಖಾಲಿ ಇರುವ 8 ನರ್ಸ್​​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬಿಎಸ್ಸಿ, ಎಂಎಸ್ಸಿ ನರ್ಸಿಂಗ್​ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್​ 17ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಅಕ್ಟೋಬರ್​ 28 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ khpt.org ಭೇಟಿ ನೀಡಿ.