ಮನೆ ಸ್ಥಳೀಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

0

ಮೈಸೂರು : 2025-26ನೇ ಸಾಲಿಗೆ ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಕೆ . ಆರ್ ನಗರ ತಾಲ್ಲೂಕಿನ ಹೆಬ್ಬಾಳು ಹಾಗೂ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿಯಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಖಾಲಿ ಇದ್ದು, ಕೃಷಿ / ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 1 ವರ್ಷದ ಕ್ಷೇತ್ರ ಮಟ್ಟದ ಅನುಭವ ಹೊಂದಿರಬೇಕು. ವೇತನ ಮಾಹೆಯಾನ ರೂ. 25,000/- ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳ ಅರ್ಜಿಯನ್ನು ಪಡೆದು, ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಪೂರ್ಣ ಮಾಹಿತಿಯೊಂದಿಗೆ ಜೂನ್ 15 ರ ಸಂಜೆ 05 ಗಂಟೆಯೊಳಗೆ ಸೀಲು ಮಾಡಿದ ಲಕೋಟಿಯಲ್ಲಿ ಮುದ್ದಾಂ / ನೊಂದಣಿ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಆಪ್ತ ವಿಭಾಗ, ಸಾರ್ವಜನಿಕ ಕಚೇರಿಗಳ ಕಟ್ಟಡ, ನ್ಯೂ ಸಯ್ಯಾಜಿರಾವ್ ರಸ್ತೆ, ಮೈಸೂರು ಇವರಿಗೆ ಸಲ್ಲಿಸಲು ಸೂಚಿಸಿದ್ದು, ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗಿಲ್ಲ. ಅರ್ಜಿಗಳಿಗೆ ವಿದ್ಯಾರ್ಹತೆ ಸಂಬಧಿಸಿದ ಎಲ್ಲಾ ವರ್ಷದ ಅಂಕಪಟ್ಟಿಗಳು, ಪ್ರಮಾಣಪತ್ರಗಳು, ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳು, ಸದರಿ ವೃತ್ತಿಗೆ ಸಂಬಂಧಿಸಿದ ಅನುಭವ ಪ್ರಮಾಣ ಪತ್ರಗಳನ್ನು ಲಗತ್ತಿಸುವುದು ಕಡ್ಡಾಯ ಮತ್ತು ಎಲ್ಲಾ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿಗಾಗಿ ಜಂಟಿ ಕೃಷಿ ನಿರ್ದೇಶಕರು, ಮೈಸೂರು ಕಛೇರಿ ದೂ. ಸಂ.: 0821-2442239 ಅನ್ನು ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆಯ ಯೋಜನಾ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರು ಅವರು ಪ್ರಕಟಣೆಯಲ್ಲಿ ಪ್ರಕಟಿಸಿದ್ದಾರೆ.