ಬೆಂಗಳೂರು (Bengaluru): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರು ರಾಜ್ಯದ ವಿವಿಧ ಕಡೆ ಇರುವ ಶಾಶ್ವತ ಲೋಕ ಅದಾಲತ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ರಾಜ್ಯದ ಬೆಂಗಳೂರು, ಬೆಳಗಾವಿ, ಮೈಸೂರು ಮತ್ತು ಮಂಗಳೂರಿನಲ್ಲಿ ಶಾಶ್ವತ (ಪರ್ಮನೆಂಟ್) ಲೋಕ ಅದಾಲತ್ನ ಖಾಲಿ ಇರುವ ಹುದ್ದೆಗಳ ವಿವರವನ್ನು ಇಲ್ಲಿ ನೀಡಲಾಗಿದೆ.
ಒಟ್ಟು 7 ಹುದ್ದೆಗಳು ಖಾಲಿ ಇವೆ. ಬೆಂಗಳೂರು 2, ಮಂಗಳೂರು 1, ಮೈಸೂರು 2, ಬೆಳಗಾವಿ 2 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 7 ಕೊನೆಯ ದಿನ.
ಹುದ್ದೆಯ ಹೆಸರು: Member of PLA 3e33: Rs.2000/- Per Sitting. ಆಸಕ್ತರು ನಿಗದಿತ ಅರ್ಜಿ ನಮೂನೆಯಲ್ಲಿ ಈ ಕೆಳಗಿನ ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬಹುದು. ಸದಸ್ಯ ಕಾರ್ಯದರ್ಶಿ, ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯ ದೇಗುಲ, ಒಂದನೇ ಮಹಡಿ, ಎಚ್. ಸಿದ್ದಯ್ಯ ರಸ್ತೆ, ಬೆಂಗಳೂರು – 560027 ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು.