ದಾವಣಗೆರೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದಂತೆ ಪ್ರಸಕ್ತ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ 397 ರಲ್ಲಿ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು
ಎತ್ತಿನಬಂಡೆ ಕ್ರೀಡೆಯನ್ನು ಪ್ರೋತ್ಸಾಹಿಸಲು ಮತ್ತು ಉತ್ತೇಜಿಸಲು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸುವ 15 ಸಂಘ-ಸಂಸ್ಥೆಗಳಿಗೆ ತಲಾ ರೂ.2 ಲಕ್ಷಗಳಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆಯ್ಕೆ ಮಾಡುವ ಸಂಘ-ಸಂಸ್ಥೆಗಳಿಗೆ ಅನುದಾನ ನೀಡಲಾಗುವುದು. ದಾವಣಗೆರೆ ಜಿಲ್ಲೆಯಲ್ಲಿ ಎತ್ತಿನಬಂಡಿ ಓಟ ಕ್ರೀಡೆಯನ್ನು ಆಯೋಜಿಸಲು ಇಚ್ಚಿಸುವ ಸಂಘ-ಸಂಸ್ಥೆಗಳು ಆಗಸ್ಟ್ 2 ರ ಒಳಗಾಗಿ ಸಂಘ-ಸಂಸ್ಥೆಗಳ ಪೂರ್ಣ ವಿವರಗಳನ್ನು ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ದೂ.ಸಂ 08192-237490 ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.














