ಮೈಸೂರು: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ/ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸುಗಳನ್ನು ಪೂರ್ಣಗೊಳಿಸಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆಯ ವೆಬ್‌ಸೈಟ್ https://swd.karnataka.gov.in/ ಮೂಲಕ ಪ್ರೋತ್ಸಾಹಧನ application ನಲ್ಲಿ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ, ಮೈಸೂರು ತಾಲ್ಲೂಕು ಡಾ. ಬಾಬು ಜಗಜೀವನರಾಂ ಭವನ ಕಟ್ಟಡ, ಆದಿಪಂಪ ರಸ್ತೆ ಒಂಟಿಕೊಪ್ಪಲು ಪೂರ್ವ ಬಡಾವಣೆ ಪಡುವಾರಹಳ್ಳಿ ಮೈಸೂರು-12, ದೂರವಾಣಿ ಸಂಖ್ಯೆ-0821-2520910 ನ್ನು ಸಂಪರ್ಕಿಸಬಹುದು ಎಂದು ಮೈಸೂರು ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














