ಮನೆ ಸ್ಥಳೀಯ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

0

ಮೈಸೂರು : ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಕೇಂದ್ರ ಸಂಘವು 2025 ನೇ ಸಾಲಿನ ಎಸ್. ಎಸ್. ಎಲ್. ಸಿ. ಮತ್ತು ಪಿ. ಯು. ಸಿ. ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ https://ksgeanews.blogspt.com/2025/05/sslc-puc-2025.html ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನಾಂಕ.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು: ವಿದ್ಯಾರ್ಥಿಯು 2025 ರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ 90% ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾದ, ವಿದ್ಯಾರ್ಥಿಯ ತಂದೆ – ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ನೌಕರರು, ನಿಗಮದ ಮಂಡಳಿ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಿಗೆ ನೇಮಕವಾಗಿರುವ ನೌಕರರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂ. : 9448208750 ಅನ್ನು ಸಂಪರ್ಕಿಸಲಾಗಿದೆ.