ಮಂಡ್ಯ: ಜಿಲ್ಲೆಯ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ 2025-26ನೇ ಸಾಲಿನ ವಿದ್ಯಾರ್ಥಿ ವೇತನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಹಿಂದಿನ ತರಗತಿಯಲ್ಲಿ ಕನಿಷ್ಠ ಶೇಕಡ 40% ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅರ್ಜಿಯನ್ನು https://ssp.postmatric.karnataka.gov.in ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿವೇತನಕ್ಕಾಗಿ ಅಗತ್ಯ ದಾಖಲಾತಿಗಳಾದ ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ ಕಾರ್ಡ್), ಅಂಕಪಟ್ಟಿ, ಭಾವಚಿತ್ರ, ಆಧಾರ ಕಾರ್ಡ್ ಜೆರಾಕ್ಸ್, ಪೋಷಕರ ಆಧಾರ ಕಾರ್ಡ್ ಜೆರಾಕ್ಸ್, ಸ್ಯಾಟ್ಸ್ (SATS ID) ನಂಬರ್, ಆದಾಯ ಪ್ರಮಾಣ ಪತ್ರ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಸಲ್ಲಿಸಲು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














