ಚಾಮರಾಜನಗರ: ಮೈಸೂರಿನ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು ೨ ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. ೫೦ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ. ೪೫ರಷ್ಟು ಅಂಕಗಳೊAದಿಗೆ ತೇರ್ಗಡೆಯಾಗಿರಬೇಕು. ತರಬೇತಿಗೆ ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ತರಬೇತಿಯು ಸಂಪೂರ್ಣವಾಗಿ ಉಚಿತವಾಗಿದ್ದು ಯಾವುದೇ ಬೋಧನಾ ಶುಲ್ಕ ಇರುವುದಿಲ್ಲ.
ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಜುಲೈ ೧೨ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ ೦೮೨೧-೨೪೯೧೬೦೦, ಮೊ.ಸಂ ೯೬೮೬೭೬೨೩೭೮ ಅನ್ನು ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














