ಮನೆ ಉದ್ಯೋಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

0

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ/ ಅತಿಥಿ ಉಪನ್ಯಾಸಕರ ಭರ್ತಿಗೆ ಕಾಲೇಜು ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಖಾಯಂ ಉಪನ್ಯಾಸಕರಿಗೆ ಹಂಚಿಕೆಯಾಗಿ ಉಳಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್​ಲೈನ್​ ಕೌನ್ಸಿಲಿಂಗ್​ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವುದು.  

Join Our Whatsapp Group

ಹುದ್ದೆ ವಿವರ: ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಸೇರಿದಂತೆ ವಿವಿಧ ವಿಷಯ ಬೋಧನೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಸಲಾಗುವುದು.

ವಿದ್ಯಾರ್ಹತೆ: ಅಭ್ಯರ್ಥಿಗಳು ಎರಡು ವರ್ಷದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಪಿಹೆಚ್​ಡಿ ವಿದ್ಯಾರ್ಹತೆ ಅಥವಾ ಎನ್​ಇಟಿ, ಕೆ-ಸೆಟ್​​, ಎಸ್ ​ಎಸ್​ ಎಲ್​ ಇಟಿ ವಿದ್ಯಾರ್ಹತೆ, ಎಂಫಿಲ್​ ವಿದ್ಯಾರ್ಹತೆ ಪಡೆದವರಿಗೆ ಹೆಚ್ಚಿನ ಅವಕಾಶ ಲಭ್ಯವಿದೆ.

ಅನುಭವ: ಅಭ್ಯರ್ಥಿಗಳು ಈಗಾಗಲೇ ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್​ ಲಿಸ್ಟ್​ ಮತ್ತು ಕೌನ್ಸಿಲಿಂಗ್​ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ವೇತನ: 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ, ಯುಜಿಸಿ ವಿದ್ಯಾರ್ಹತೆ ಹೊಂದಿದವರಿಗೆ 39 ಸಾವಿರ ರೂ.

5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿದವರಿಗೆ 38 ಸಾವಿರ ರೂ.

5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 31 ಸಾವಿರ ರೂ. ವೇತನ ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಗಸ್ಟ್​​ 31ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 7 ಆಗಿದೆ. ತಾತ್ಕಾಲಿಕ ಮೆರಿಟ್​ ಪಟ್ಟಿ ಸೆಪ್ಟೆಂಬರ್​ 8ರಂದು ಬಿಡುಗಡೆಯಾಗುವ ನಿರೀಕ್ಷೆ ಇದೆ.

ಅರ್ಜಿ ಸಲ್ಲಿಕೆ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗಳಿಗೆ ಅಭ್ಯರ್ಥಿಗಳು dce.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.