ಮನೆ ಉದ್ಯೋಗ ವಸತಿ ಶಾಲೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ವಸತಿ ಶಾಲೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

0

ಮೈಸೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೈಸೂರು ಜಿಲ್ಲಾ ಕಛೇರಿಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹಲಗನಹಳ್ಳಿ ಹಾಲಿ ಬೆಟ್ಟದಪುರ ಶಾಖೆಯನ್ನು 6 ನೇ ತರಗತಿಯಿಂದ 12 ನೇ ತರಗತಿವರೆಗೆ ಶಾಲೆಯಾಗಿ ಪರಿವರ್ತಿಸಿದ್ದು, 2023-24ನೇ ಸಾಲಿನ ಪ್ರಥಮ ಪಿಯುಸಿ ಸಿ.ಇ.ಬಿ.ಎ (ವಾಣಿಜ್ಯ) ವಿಭಾಗವನ್ನು ಪ್ರಾರಂಭಿಸಲಾಗಿದ್ದು, ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ, ಇಂಗ್ಲೀಷ್, ಅರ್ಥಶಾಸ್ತ್ರ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಡಿಸೆಂಬರ್ 15 ರೊಳಗೆ ಕಚೇರಿ ವೇಳೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೈಸೂರು ಅಥವಾ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬೆಟ್ಟದಪುರ ಪಿರಿಯಾಪಟ್ಟಣ ಶಾಲೆಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ, ಮೈಸೂರು ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು, ದೂ.ಸಂ: 8197365501, 9611787204 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಕಲಬುರಗಿ: 3 ಸಾವಿರ ರೂ.ಲಂಚ ಪಡೆಯುತ್ತಿದ್ದ ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಮುಂದಿನ ಲೇಖನNCLT: 09 ರೆಕಾರ್ಡ್ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ