ಮನೆ ರಾಜ್ಯ ಕೃಷ್ಣರಾಜ ಹಾಗೂ ಚಾಮರಾಜ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರ ನೇಮಕ

ಕೃಷ್ಣರಾಜ ಹಾಗೂ ಚಾಮರಾಜ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರ ನೇಮಕ

0

ಮೈಸೂರು: 2023ರ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯನ್ನು ಅತ್ಯಂತ ಪಾರದರ್ಶಕತೆಯಿಂದ ಹಾಗೂ ಶಾಂತಿಯುತವಾಗಿ ನಡೆಸುವ ದೃಷ್ಟಿಯಿಂದ ಕೇಂದ್ರ ಚುನಾವಣಾ ಆಯೋಗವು 216-ಕೃಷ್ಣರಾಜ ವಿಧಾನಸಭಾ ಕ್ಷೇತ್ರ ಮತ್ತು 217-ಚಾಮರಾಜ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರನ್ನಾಗಿ ಹಿರಿಯ ಐಎಎಸ್ ಅಧಿಕಾರಿಯಾದ ಧೀರಜ್ ಗುಪ್ತ ರವರನ್ನು ನೇಮಕ ಮಾಡಿದ್ದು, ಸದರಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಅಥವಾ ಚುನಾವಣಾ ಅಕ್ರಮಗಳು ಕಂಡುಬಂದಲ್ಲಿ ಸಾರ್ವಜನಿಕರು ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಹಾಜರಾಗಿ ಅಥವಾ ದೂರವಾಣಿ ಮುಖಾಂತರ ಹಾಗೂ ವಾಟ್ಸಪ್ ಮೂಲಕ ಚುನಾವಣಾ ವೀಕ್ಷಕರಿಗೆ ದೂರು ಸಲ್ಲಿಸಬಹುದಾಗಿದೆ.

Join Our Whatsapp Group

ಚುನಾವಣಾ ವೀಕ್ಷಕರನ್ನು ಬೆಳಗ್ಗೆ 9 ಗಂಟೆಯಿಂದ 11 ಗಂಟೆವರೆಗೆ ಸರ್ಕಾರಿ ಅತಿಥಿ ಗೃಹದ ಕೊಠಡಿ ಸಂಖ್ಯೆ 10 ರಲ್ಲಿ ಹಾಗೂ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಕೊಠಡಿ ಸಂಖ್ಯೆ 14 ರಲ್ಲಿ ಅಥವಾ ದೂರವಾಣಿ ಸಂಖ್ಯೆ:7411509284 ಅನ್ನು ಸಂಪರ್ಕಿಸಬಹುದು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಪ್ರತಿದಿನ ಮಿತವಾಗಿ ಒಣ ಖರ್ಜೂರ ಸೇವನೆ ಮಾಡುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನ
ಮುಂದಿನ ಲೇಖನ‘ಮಗಳೇ’ ಚಿತ್ರ ವಿಮರ್ಶೆ