ಬೆಂಗಳೂರು: ಇಂದು ಸಿಎಂ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರನ್ನು ನೇಮಕಗೊಳಿಸಿ ರಾಜ್ಯಸರ್ಕಾರ ಆದೇಶಿಸಿದೆ.
ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ಅವರನ್ನು ನೇಮಿಸಲಾಗಿದೆ. ಗೃಹ ಇಲಾಖೆ ಜೊತೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇನ್ನು ಇದೇ ವೇಳೆ ಶಶಿಕಿರಣ್ ಶೆಟ್ಟಿ ಅವರನ್ನು ನೂತನ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಸಿಎಂ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಆದೇಶ ಹೊರಡಿಸಿದ್ದಾರೆ.
ಹಾಗೂ ಸಿಎಂ ವಿಶೇಷಾಧಿಕಾರಿಯಾಗಿ ಎಂ. ವೆಂಕಟೇಶ್ ಅವರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ.
ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಮೊನ್ನೇ ಅಷ್ಟೇ ಅಲೋಕ್ ಮೋಹನ್ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನಾಗಿ ಸರ್ಕಾರ ನೇಮಕಗೊಳಿಸಿತ್ತು.