ಮನೆ ರಾಜಕೀಯ ಜೆಡಿಎಸ್ ತೊರೆದ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ

ಜೆಡಿಎಸ್ ತೊರೆದ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ

0

ಹಾಸನ: ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರು ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.

ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರನ್ನು ಭೇಟಿಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ನಾನು ಶಾಸಕ ಸ್ಥಾನಕ್ಕೆ ಸಂತೋಷದಿಂದ ರಾಜಿನಾಮೆ ಸಲ್ಲಿಸಿದ್ದೇನೆ. ಇಷ್ಟು ದಿನ ಶಾಸಕನಾಗಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿಕೊಟ್ಟ ಜೆಡಿಎಸ್ ಗೆ ಧನ್ಯವಾದಗಳು. ಅತ್ಯಂತ ಪ್ರಾಮಾಣಿಕವಾಗಿ ಕೆಲಸವನ್ನು ಮಾಡಿರುವ ತೃಪ್ತಿ ನನಗಿದೆ ಎಂದರು.

ನಾನು ಯಾವುದೇ ವೈಯಕಿಕ ಹಿತಾಸಕ್ತಿಯಿಂದ ರಾಜಕೀಯ ಮಾಡಿಲ್ಲ. ಶಾಸಕನಾಗಿದ್ದಾಗ ಜನಪರ ಕೆಲಸ ಮಾಡಿದ್ದೇನೆ.  ಜೆಡಿಎಸ್ ಬಿಡುವುದಾಗಿ ನಾನೂ ಎಲ್ಲೂ ಹೇಳಿಲ್ಲ, ಆದರೆ, ಜೆಡಿಎಸ್ ಮುಖಂಡರೇ ನನ್ನನ್ನು ಪಕ್ಷದಿಂದ ಹೊರ ಹಾಕಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದೇ ನನಗೆ ಮುಳುವಾಯಿತು ಎಂದಿದ್ದಾರೆ.