ನವದೆಹಲಿ: ಸೇನಾ ದಿನದಂದು ದೇಶದ ಸೈನಿಕರ ಅಚಲ ಬದ್ಧತೆ ಮತ್ತು ತ್ಯಾಗವನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.
ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಸೈನಿಕರು ಶಕ್ತಿ ಮತ್ತು ಸ್ಥಿರತೆಯ ಆಧಾರ ಸ್ತಂಭಗಳು ಎಂದು ಹೇಳಿದ್ದಾರೆ.
ಸೇನಾ ದಿನದಂದು ನಾವು ನಮ್ಮ ಸೇನಾ ಸಿಬ್ಬಂದಿಯ ಅಸಾಧಾರಣ ಧೈರ್ಯ, ಅಚಲ ಬದ್ಧತೆ ಮತ್ತು ತ್ಯಾಗವನ್ನು ಗೌರವಿಸುತ್ತೇವೆ. ನಮ್ಮ ದೇಶವನ್ನು ರಕ್ಷಿಸುವಲ್ಲಿ ಮತ್ತು ನಮ್ಮ ಸಾರ್ವಭೌಮತ್ವವನ್ನು ಎತ್ತಿಹಿಡಿಯುವಲ್ಲಿ ಅವಿರತ ಸಮರ್ಪಣೆ, ಅವರ ಶೌರ್ಯಕ್ಕೆ ಸಾಕ್ಷಿಯಾಗಿದೆ. ಅವರು ಶಕ್ತಿ ಮತ್ತು ಸ್ಥಿರತೆಯ ಆಧಾರ ಸ್ತಂಭಗಳು ಎಂದು ಬರೆದುಕೊಂಡಿದ್ದಾರೆ.
ದೇಶದ ಮೊದಲ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ ಅವರ ಸ್ಮರಣಾರ್ಥ ಜ. 15ರಂದು ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ.