ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 10 ಲಕ್ಷದಷ್ಟು ಹಣ ವಶಕ್ಕೆ ಪಡೆದಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಗರದಲ್ಲಿ ಲ್ಯಾಪ್ ಟಾಪ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 75 ಲಕ್ಷ ಮೌಲ್ಯದ ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದಿದ್ದೇವೆ ಎಂದು ತಿಳಿಸಿದರು.
ಆರೋಪಿಗಳು ಮೂಲತಃ ಹೈದ್ರಾಬಾದ್ ನವರು. ಆರೋಪಿ ಪ್ರತಿಷ್ಠಿತ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದನು. ಈ ಹಿಂದೆ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದರಿಂದ ಕಂಪನಿಯಿಂದ ಹೊರ ಹಾಕಿದ್ದರು. ಅದಾದ ಬಳಿಕ ಸಹ ಕಳ್ಳತನ ಕೃತ್ಯ ಮುಂದುವರೆಸಿದ್ದನು. ಈತ ತಂದ ವಸ್ತುಗಳನ್ನು ಪಡೆದು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಹ ಬಂಧಿಸಲಾಗಿದೆ ಎಂದರು.
ನಗರದಲ್ಲಿ ಪೊಲೀಸ್ ಗಸ್ತು ವ್ಯವಸ್ಥೆ ಪರಿಣಾಮಕಾರಿಯಾಗಿ ನಡೆಯುತ್ತಿವೆ. ನಗರದಾದ್ಯಂತ ಚೀತಾ, ಹೊಯ್ಸಳ ನಿರಂತರ ಬೀಟ್ ಮಾಡುತ್ತಿವೆ. ನೈಟ್ ಬೀಟ್ ಸಹ ವ್ಯವಸ್ಥಿತವಾಗಿ ನಡೆಯುತ್ತಿದೆ. ಸ್ಪಾರ್ಟ್ ಇ ಬೀಟ್ ಸಹ ಬಳಸಿಕೊಂಡು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಮುಂಜಾನೆ ಸಹ ಗುಡ್ ಮಾರ್ನಿಂಗ್ ಬೀಟ್ ಆಗಿ ಸಹ ಕಾರ್ಯಾಚರಣೆ ಮಾಡಲಾಗುತ್ತಿದೆ. ಅನುಮಾನಸ್ಪದ ವ್ಯಕ್ತಿಗಳ ಪರಿಶೀಲಿಸಲಾಗುತ್ತಿದೆ. ಫಿಂಗರ್ ಪ್ರಿಂಟ್ ಸ್ಕ್ಯಾನ್ ಮೂಲಕ ಹಿನ್ನಲೆಯನ್ನು ಪತ್ತೆ ಹಚ್ಚಲಾಗುತ್ತಿದೆ. ಸಿಬ್ಬಂದಿಗಳ ಕೊರತೆ ಇದ್ದರೂ ಸಹ ವ್ಯವಸ್ಥಿತವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣದ ವಿಚಾರವಾಗಿ ಮಾತನಾಡಿದ ಅವರು ಆರೋಪಿ ಬಂಧಿಸಿ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಸಲಾಗುತ್ತಿದೆ. ಅವರ ಬಳಿಯೇ ಕಿರಣ ಕೆಲಸ ಮಾಡುತಿದ್ದನು. ಈ ಕೊಲೆ ಪ್ರಕರಣದಲ್ಲಿ ಹಂತ ಹಂತವಾಗಿ ಏನಾಗಿದೆ ಎಂದು ವಿಚಾರಣೆ ಮಾಡಲಾಗುತ್ತಿದೆ. ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲಾಗುತ್ತಿದೆ. ತನಿಖೆಯಲ್ಲಿ ಪತ್ತೆಯಾದ ಸಾಕ್ಷಿಗಳ ಆಧಾರದ ಮೇಲೆ ತನಿಖೆ ನಡೆಸಲಾಗುವುದು. ನಿಷ್ಪಕ್ಷಪಾತವಾಗಿ ಪ್ರಕರಣದ ತನಿಕೆ ನಡೆಸಲಾಗುವುದು ಎಂದರು.