ಮನೆ ಅಪರಾಧ ಚಾಕೋಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ 52 ವರ್ಷದ ಕಾಮುಕನ ಬಂಧನ

ಚಾಕೋಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ 52 ವರ್ಷದ ಕಾಮುಕನ ಬಂಧನ

0

ರಾಯಚೂರು: ಚಾಕೊಲೇಟ್ ಆಸೆ ತೋರಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ​ಎಚ್ ಕ್ಯಾಂಪ್ 3ರಲ್ಲಿ ನಡೆದಿದೆ.

Join Our Whatsapp Group

ಅತ್ಯಾಚಾರವೆಸಗಿದ ಸಪನ್ ಮಂಡಲ್(52) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

4ನೇ ತರಗತಿ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಡಿಸೋದಾಗಿ ಪುಸಲಾಯಿಸಿ ಸ್ಕೂಟರ್​ ನಲ್ಲಿ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ.

ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಆದೇಶಿಸಿದ್ದಾರೆ.

ಹಿಂದಿನ ಲೇಖನಇ–ಸ್ವತ್ತು ನೀಡಲು 1 ಲಕ್ಷ ಲಂಚ: ನಗರಸಭೆಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ
ಮುಂದಿನ ಲೇಖನವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು ಆರೋಪ: ಪರಿಹಾರ ನೀಡುವಂತೆ ಒತ್ತಾಯಿಸಿ ಸಂಬಂಧಿಕರಿಂದ ಪ್ರತಿಭಟನೆ