ದಾವಣಗೆರೆ: ನಾಡಬಾಂಬ್ ಬಳಸಿ ಕಾಡುಪ್ರಾಣಿಯನ್ನು ಬೇಟೆಯಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.
ನ್ಯಾಮತಿ ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದ ನಿವಾಸಿ ಬಸವರಾಜಪ್ಪ (42) ಬಂಧಿತ ಆರೋಪಿ. ಅಪ್ಪು (38) ಪರಾರಿಯಾಗಿದ್ದಾನೆ.
ಆರೋಪಿ ಬಳಿ ಇದ್ದ 63 ಜೀವಂತ ನಾಡಬಾಂಬ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ನ್ಯಾಮತಿ ಶಾಖೆಯ ಹರಮಘಟ್ಟ ಅರಣ್ಯ ಪ್ರದೇಶದಲ್ಲಿ ನಾಡಬಾಂಬ್ ಗಳನ್ನು ಕೋಳಿ ಹಾಗೂ ಕುರಿ ಮಾಂಸದಲ್ಲಿಟ್ಟು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಮುಂದಾಗಿದ್ದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಸದ್ಯ ಪೊಲೀಸರು ಆರೋಪಿ ಬಸವರಾಜಪ್ಪನನ್ನು ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು ವಶಪಡಿಸಿಕೊಂಡ ಜೀವಂತ ನಾಡ ಬಾಂಬ್ ಗಳನ್ನು ನಿಷ್ಕ್ರಿಯ ಗೊಳಿಸಲು ಚಿತ್ರದುರ್ಗ ಜಿಲ್ಲೆಯ ಡಿಎಸ್ ಹಳ್ಳಿ ಸ್ಪೋಟಕ ವಸ್ತು ಸಂಗ್ರಹಾಲಯಕ್ಕೆ ರವಾನೆ ಮಾಡಲಾಗಿದೆ.