Saval TV on YouTube
ಕೊಪ್ಪಳ(Koppala): ನಗರದಿಂದ ತಾಲ್ಲೂಕಿನ ಕವಲೂರು ಗ್ರಾಮಕ್ಕೆ ಮಂಗಳವಾರ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದು, ಮದ್ಯ ವಶಪಡಿಸಿಕೊಂಡಿದ್ದಾರೆ.
ಕವಲೂರಿನ ಶ್ರೀಕಾಂತ್ ಬಂಧಿತ ಆರೋಪಿ.
ನಗರದ ದೇವಿ ಬಾರ್’ನಿಂದ ಕವಲೂರಿನ ಶ್ರೀಕಾಂತ್ 20 ಬಾಕ್ಸ್ ಮದ್ಯ ಹಾಗೂ ಎರಡು ಬಾಕ್ಸ್ ಬಿಯರ್ ತೆಗೆದುಕೊಂಡು ಹೋಗುತ್ತಿದ್ದ. ಇವುಗಳ ಒಟ್ಟು ಬೆಲೆ ₹75 ಸಾವಿರ ಎಂದು ಅಂದಾಜಿಸಲಾಗಿದೆ.
ಮದ್ಯ ತುಂಬಿಕೊಂಡು ಹೋಗುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಕಾರು ಅಪಘಾತವಾಗಿದೆ ಎಂದು ನಮಗೆ ಮಾಹಿತಿ ಬಂದಾಗ ಹೋಗಿ ಪರಿಶೀಲನೆ ನಡೆಸಿದೆವು. ಆಗ ಮದ್ಯ ಅಕ್ರಮ ಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಶ್ರೀಕಾಂತ್ ವಿರುದ್ಧ ದೂರು ದಾಖಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.