ಬೆಂಗಳೂರು: ಐಷಾರಾಮಿ ಜೀವನ ಶೈಲಿಗಾಗಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ರಾಜಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಮೂಲದ ರಫೀಕ್ (29) ಬಂಧಿತ ಆರೋಪಿ.
ಒಂದು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿ ನೆಲಮಂಗಲ ಹಾಗೂ ರಾಜಾಜಿನಗರದಲ್ಲಿ ಮತ್ತೆ ಕಳ್ಳತನ ಮಾಡಿ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ವಿಚಾರಣೆ ವೇಳೆ ನೆಲಮಂಗಲದ ಬಳಿ ಫಿಶ್ ಟೆಂಡರ್ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರ ಮನೆಯಲ್ಲಿಯೂ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ಸದ್ಯ ಈ ಎರಡು ಪ್ರಕರಣಗಳಿಂದ 22 ಲಕ್ಷ ಮೌಲ್ಯದ 409 ಗ್ರಾಂ ಚಿನ್ನ 425 ಗಾಂಬೆಲಿ, 189 ಗ್ರಾಂ ತೂಕದ ನಕಲಿ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Saval TV on YouTube