ಮನೆ ಅಪರಾಧ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

0

ಮಂಗಳೂರು(ದಕ್ಷಿಣ ಕನ್ನಡ): ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಆರೋಪಿಗಳಿಂದ 95 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಲಾಗಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಯಿನೂರು ರಸ್ತೆಯ ಪ್ರಮೋದ್ ಎಂ.ಜಿ. ಡಿಸ್ಕ್ (30), ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ನ ರಾಶೀದ್ ಎಂ.ಝಡ್ ಯಾನೆ ರಾಶಿ (41), ಮಡಿಕೇರಿಯ ಕಡಗದಾಳು ಗ್ರಾಮದ ದರ್ಶನ್ ಎಸ್.(24) ಬಂಧಿತ ಆರೋಪಿಗಳಾಗಿದ್ದಾರೆ.

ಮಂಗಳೂರಿನ ಪಳ್ನೀರು ಬಳಿಯ ಲಾಡ್ಜ್ ವೊಂದರಲ್ಲಿ ಮೂವರು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ದಾಳಿ ನಡೆಸಿ ಬಂಧಿಸಿದರು. ಆರೋಪಿಗಳಿಂದ 75 ಸಾವಿರ ರೂ. ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಗಳನ್ನು ವಶಪಡಿಸಿದ್ದಾರೆ.

ಆರೋಪಿತರಲ್ಲಿ ಪ್ರಮೋದ್ ಎಂಜಿ ಡಿಸ್ಕ್ ಎಂಬಾತನ ಮೇಲೆ ಸುಳ್ಯ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಕೊಲೆಯತ್ನ ಹಾಗೂ ಮಡಿಕೇರಿ ನಗರ ಠಾಣೆಯಲ್ಲಿ ಸುಲಿಗೆ, ದರೋಡೆ ಪ್ರಕರಣಗಳು ದಾಖಲಾಗಿವೆ. ರಾಶೀದ್ ಎಂ.ಝಡ್ ಯಾನೆ ರಾಶಿ ಎಂಬಾತನ ಮೇಲೆ ಮಡಿಕೇರಿ ಜಿಲ್ಲೆಯ ಭಾಗಮಂಡಲ ಠಾಣೆಯಲ್ಲಿ ದರೋಡೆ ಹಾಗೂ ಮಡಿಕೇರಿ ನಗರ ಠಾಣೆಯಲ್ಲಿ ಕೊಲೆ, ದರೋಡೆ, ಸುಲಿಗೆ ಪ್ರಕಣಗಳು ದಾಖಲಾಗಿರುತ್ತವೆ. ದರ್ಶನ್ ಎಸ್. ಎಂಬಾತನ ಮೇಲೆ ಮಡಿಕೇರಿ ನಗರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಿಂದಿನ ಲೇಖನಮಾಹಿತಿ ಹಕ್ಕು ಕಾಯ್ದೆಯನ್ವಯ ದಾಖಲೆ ನೀಡದ ಕಾರಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಆದೇಶ
ಮುಂದಿನ ಲೇಖನಮಂಡ್ಯ:ಧಾರಾಕಾರ ಮಳೆಗೆ ವಿಸಿ ನಾಲೆಯ ಸುರಂಗ ಭೂ ಕುಸಿತ