ತೀರ್ಥಹಳ್ಳಿ: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಬುಧವಾರ ಸಂಜೆ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಸಂಬಂಧ ಸುನಿಲ್ (34) ಮತ್ತು ಕಾರ್ತಿಕ್ (29) ಎಂಬುವವರನ್ನು ಬಂಧಿಸಲಾಗಿದೆ. ಡಿವೈಎಸ್ ಪಿ ಗಜಾನನ ವಾಮನ ಸುತಾರ, ಇನ್ಸ್ ಪೆಕ್ಟರ್ ಅಶ್ವಥ್ ಗೌಡ, ಸಬ್ ಇನ್ಸ್‌ಪೆಕ್ಟರ್ ಗಾದಿ ಲಿಂಗಪ್ಪ ಗೌಡರ್ ನೇತೃತ್ವದಲ್ಲಿ ತೀರ್ಥಹಳ್ಳಿ ಠಾಣೆ ಪೊಲೀಸರು ದಾಳಿಯಲ್ಲಿ ಪಾಲ್ಗೊಂಡಿದ್ದರು.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















