ಥಾಣೆ: ನವಿ ಮುಂಬೈಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಇದೇ ಪ್ರಕರಣದಲ್ಲಿ ಆಫ್ರಿಕಾ ಮೂಲದ ಎಂಟು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಖಾರ್ಘರ್ ಎಂಬಲ್ಲಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದಾಳಿ ನಡೆಸಲಾಗಿದೆ ಎಂದು ಇನ್ ಪೆಕ್ಟರ್ ರಾಜೀವ್ ಶೆಜ್ವಾಲ್ ತಿಳಿಸಿದ್ದಾರೆ.
ದಾಳಿ ವೇಳೆ ಓರ್ವ ಮಹಿಳೆ ಪರಾರಾಯಾಗಿದ್ದಾಳೆ. 25ರಿಂದ 30 ವರ್ಷ ವಯೋಮಾನದ ಆಫ್ರಿಕಾ ಮೂಲದ ಎಂಟು ಮಹಿಳೆಯರನ್ನು ರಕ್ಷಿಸಲಾಗಿದೆ. ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.