ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಫೆ.17) ದೆಹಲಿ ನ್ಯಾಯಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.
ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ ಆರು ಬಾರಿ ಇಡಿ ಅವರಿಗೆ ಸಮನ್ಸ್ ನೀಡಿತ್ತು ಒಂದಕ್ಕೂ ಉತ್ತರ ನೀಡಿಲ್ಲ. ಈ ಕಾರಣಕ್ಕೆ ಕೋರ್ಟ್ ಅವರಿಗೆ ವಿಚಾರಣೆ ಬರುವಂತೆ ಆದೇಶವನ್ನು ನೀಡಿತ್ತು. ಕೋರ್ಟ್ ಆದೇಶದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.
ದೆಹಲಿಯಲ್ಲಿ ವಿಧಾನಸಭೆ ಕಲಾಪ ನಡೆಯುತ್ತಿದ್ದು, ಇಂದು ವಿಶ್ವಾಸ ಮತಯಾಚನೆ ನಡೆಯಲಿದೆ. ಆ ಕಾರಣದಿಂದ ದೈಹಿಕವಾಗಿ ಸದನದಲ್ಲಿ ಹಾಜರಾಗಬೇಕು ಅದಕ್ಕಾಗಿ ಕೋರ್ಟ್ ವಿಚಾರಣೆಗೆ ಅವರು ವಿಡಿಯೋ ಕಾನ್ಫರೆನ್ಸ್ ಹಾಜರಾಗುತ್ತಿದ್ದಾರೆ ಎಂದು ಕೇಜ್ರಿವಾಲ್ ಪರ ವಕೀಲರು ಹೇಳಿದ್ದಾರೆ.
ಮುಂದಿನ ಕೋರ್ಟ್ ವಿಚಾರಣೆಗೆ ದೈಹಿಕವಾಗಿ ಹಾಜರಾಗುವುದಾಗಿ ಹೇಳಿದ್ದಾರೆ.
ಕೇಜ್ರಿವಾಲ್ ಅವರು ಈ ಮನವಿಯನ್ನು ಕೋರಿ ಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ನ್ಯಾಯಲಯವು ಕೂಡ ಇದಕ್ಕೆ ಸಮ್ಮತಿಯನ್ನು ಸೂಚಿಸಿದೆ. ಈ ಹಿಂದೆ ಇಡಿ ನೀಡಿದ ಆರು ಸಮನ್ಸ್ಗೆ ಉತ್ತರ ನೀಡದ ಕೇಜ್ರಿವಾಲ್ ವಿರುದ್ಧ ಇಡಿ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ಈ ದೂರಿನ ಆಧಾರದ ಮೇಲೆ ಫೆ.16ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು.
ಕೇಜ್ರಿವಾಲ್, ಸಂಜಯ್ ಸಿಂಗ್ ವಿರುದ್ಧದ ಸಮನ್ಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ
ಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ಪದವಿಗಳ ಬಗ್ಗೆ ಪ್ರಶ್ನಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅಹಮದಾಬಾದ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನ್ಯಾಯಮೂರ್ತಿ ಎಚ್ ಡಿ ಸುತಾರ್ ಅವರ ನ್ಯಾಯಾಲಯವು ಅರ್ಜಿಗಳನ್ನು ವಜಾಗೊಳಿಸುವಾಗ, ಸಮನ್ಸ್ ರದ್ದುಗೊಳಿಸಲು ಕೇಜ್ರಿವಾಲ್ ಮತ್ತು ಸಿಂಗ್ ಅವರು ಉಲ್ಲೇಖಿಸಿದ ಕಾರಣಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ಸಲ್ಲಿಸಬಹುದು ಎಂದು ಹೇಳಿದರು.