ಬೆಂಗಳೂರು: ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟೀಸ್ ಪಿ. ಎಸ್. ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.
ಜಸ್ಟಿಸ್ ಪಿ.ಎಸ್ ದಿನೇಶ್ ಕುಮಾರ್ ಅವರು 2015ರಿಂದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ, ಅವರನ್ನು ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
Saval TV on YouTube