ಮೈಸೂರು(Mysuru): ಆಷಾಢಮಾಸ 3ನೇ ಶುಕ್ರವಾರ ಹಿನ್ನೆಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಡಿನ ಜನತೆಗೆ ಒಳಿತಾಗುವಂತೆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿದ್ದೇನೆ. ಉತ್ತಮ ಮಳೆಯಾಗಿದ್ದು, ನಾಡು ಸಮೃದ್ಧಿಗೆ ಬೇಡಿಕೊಂಡಿದ್ದೇನೆ ಎಂದು ತಿಳಿಸಿದರು.
ಶಾಲಾ ಮಕ್ಕಳಿಗೆ ಮೊಟ್ಟೆ ತೆಗೆದು ಹಾಕುವಂತೆ ಎನ್‍ಇಪಿ ಸಮಿತಿ ಶಿಫಾರಸ್ಸು ವಿಚಾರ ಕುರಿತು ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರ ಮಕ್ಕಳಿಗೆ ಮೂಲಭೂತ ಸೌಲಭ್ಯಗಳನ್ನ ಕೊಡುತ್ತಿಲ್ಲ. ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ಕೊಡಬೇಕೆಂದು ನಾನು ಸರ್ಕಾರಕ್ಕೆ ಒತ್ತಾಯಿಸುತ್ತೇನೆ. ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಮೊಟ್ಟೆ ಎಲ್ಲವನ್ನೂ ಕೊಡಬೇಕು ಎಂದು ಹೇಳಿದರು.
ಸಿದ್ಧರಾಮೋತ್ಸವ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ರೇವಣ್ಣ, ಸಿದ್ದರಾಮಯ್ಯ ಕಾಂಗ್ರೆಸ್ ನವರು ನಮಗೂ ಅದಕ್ಕೂ ಸಂಭಂದವಿಲ್ಲ ಎಂದರು.
ಇದನ್ನೂ ಓದಿ…ಮೂರನೇ ಆಷಾಡ ಶುಕ್ರವಾರ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ