ಮನೆ ರಾಜ್ಯ  ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ಸಾವು

 ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ಸಾವು

0

ಮೈಸೂರು: ಎರಡು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ 38 ವರ್ಷದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಜೂ. 11ರ ಮಂಗಳವಾರ ಮೃತಪಟ್ಟಿದೆ.

Join Our Whatsapp Group

ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದ ಅಶ್ವತ್ಥಾಮ ಮೇವು ಅರಸಿ ಕಾಡಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.

ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಮೂಲಗಳು ತಿಳಿಸಿದ್ದರೆ, ಇಲಾಖೆ ಮೂಲಗಳು ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಹೇಳಿವೆ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು ನಾಲ್ಕು ವರ್ಷದಲ್ಲಿಯೇ 2021ರ ದಸರೆಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.‌

2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿತ್ತು. ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿರಲಿಲ್ಲ.

ಹಿಂದಿನ ಲೇಖನಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ: ಸಿಎಂ ಸೂಚನೆ
ಮುಂದಿನ ಲೇಖನಶ್ರೀ ರಾಘವೇಂದ್ರ ಸ್ವಾಮಿಗಳ ಅನಾಥ ಸೇವಾಶ್ರಮ