ಮೈಸೂರು: ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಗೌರವ ಡಾಕ್ಟರೇಟ್ ಸ್ವೀಕರಿಸಿದ ಪತ್ನಿ ಅಶ್ವಿನಿ ಅವರು ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಹೆಸರಿನಲ್ಲಿ ಮುಂದಿನ ವರ್ಷದಿಂದ ಎರಡು ಚಿನ್ನದ ಪದಕ ನೀಡುವುದಾಗಿ ಘೋಷಿಸಿದ್ದಾರೆ.
ಕ್ರಾಫರ್ಡ್ ಹಾಲ್ ನಲ್ಲಿ ನಡೆಯುತ್ತಿರುವ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ನಿರೂಪಣೆ ಮಾಡುತ್ತಿದ್ದ ಪ್ರೊ.ಸಿ.ನಾಗಣ್ಣ ಈ ವಿಷಯವನ್ನು ಅಧಿಕೃತವಾಗಿ ಘೋಷಿಸಿದರು.
ಪಾರ್ವತಮ್ಮ ರಾಜ್ ಕುಮಾರ್ ಹೆಸರಲ್ಲಿ ಬುಸಿನೆಸ್ ಮ್ಯಾನೆಜ್ ಮೆಂಟ್ (ಎಂಬಿಎ) ವಿಷಯದಲ್ಲಿ ಹಾಗೂ ಲಲಿತಕಲಾ ವಿಷಯದಲ್ಲಿ ಡಾ.ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಚಿನ್ನದ ಪದಕ ನೀಡಲಾಗುತ್ತದೆ ಎಂದು ತಿಳಿಸಿದರು.