ಮನೆ ರಾಜ್ಯ ಕಾಮನ್‌ವೆಲ್ತ್‌ನಲ್ಲಿ ಬೆಳ್ಳಿ ಗೆದ್ದ ಅಶ್ವಿನಿ ಪೊನ್ನಪ್ಪಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ. ನಗದು ಬಹುಮಾನ...

ಕಾಮನ್‌ವೆಲ್ತ್‌ನಲ್ಲಿ ಬೆಳ್ಳಿ ಗೆದ್ದ ಅಶ್ವಿನಿ ಪೊನ್ನಪ್ಪಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ. ನಗದು ಬಹುಮಾನ ಘೋಷಣೆ

0

ಬೆಂಗಳೂರು(Bengaluru): ಬರ್ಮಿಗ್ ಹ್ಯಾಮ್‌ನಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿರುವ ಭಾರತೀಯ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.
ಬ್ಯಾಡ್ಮಿಂಟನ್ ಮಿಕ್ಸಡ್ ಡಬಲ್ಸ್‌ನಲ್ಲಿ ಬೆಳ್ಳಿ ಗೆದ್ದ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ. ನಗದು ಪುರಸ್ಕಾರವನ್ನು ಸಚಿವ ಡಾ.ನಾರಾಯಣಗೌಡ ಘೋಷಿಸಿದ್ದಾರೆ.
ಈಗಾಗಲೇ ಕ್ರಿಕೆಟ್‌ನಲ್ಲಿ ಬೆಳ್ಳಿ ಪದಕ ವಿಜೇತೆ ರಾಜೇಶ್ವರಿ ಗಾಯಕ್ವಾಡ್ ಗೆ 15 ಲಕ್ಷ ಹಾಗೂ ವೇಟ್ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಗುರುರಾಜ ಪೂಜಾರಿಗೆ 8 ಲಕ್ಷ ನಗದು ಪುರಸ್ಕಾರ ಘೋಷಿಸಲಾಗಿದೆ. ಇವರೆಲ್ಲರಿಗೂ ಶೀಘ್ರದಲ್ಲೇ ಮುಖ್ಯಮಂತ್ರಿಗಳ ಮೂಲಕ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಇದೇ ವೇಳೆ ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ ಆಯ್ಕೆಯಾಗಿರುವ ಕ್ರೀಡಾಪಟುಗಳನ್ನು ಸತ್ಕರಿಸಲಾಗುವುದು ಎಂದು ಸಚಿವ ತಿಳಿಸಿದ್ದಾರೆ.