ಮನೆ ಕ್ರೀಡೆ ಏಷ್ಯಾಕಪ್: ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾಗೆ  228 ರನ್ ಗಳ ಗೆಲುವು 

ಏಷ್ಯಾಕಪ್: ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾಗೆ  228 ರನ್ ಗಳ ಗೆಲುವು 

0

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ ಮತ್ತು ಕನ್ನಡಿಗ ಕೆಎಲ್ ರಾಹುಲ್ ಜೋಡಿ ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಏಷ್ಯಾ ಕಪ್ ಇತಿಹಾಸದ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದಾರೆ.

ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ಭಾನುವಾರ ಆರಂಭವಾದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

ಗಿಲ್ 37 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ರೋಹಿತ್ ಶರ್ಮಾ 42 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದರು. ಅಲ್ಲದೆ 16.3 ಓವರ್ ಗಳಲ್ಲಿ 121 ರನ್ ಗಳ ಜೊತೆಯಾಟವಾಡಿದರು.

ಶಾದಾಬ್ ಖಾನ್ ರೋಹಿತ್ ಶರ್ಮಾ 56 ರನ್ ಗೆ  ಕ್ಯಾಚ್ ನೀಡಿ ನಿರ್ಗಮಿಸಿದರು. 58 ರನ್ ಗಳಿಸಿದ್ದ ಶುಭ್ಮನ್ ಗಿಲ್ ಶಾಹೀನ್ ಅಫ್ರಿದಿ ಎಸೆತದಲ್ಲಿ ಔಟಾದರು. ಜೊತೆಗೂಡಿದ ಕೆ ಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ತಂಡದ ಮೊತ್ತಕ್ಕೆ 24 ರನ್ ಸೇರಿಸಿದರು. ಟೀಮ್ ಇಂಡಿಯಾ 24.1 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿದ್ದ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲಾಯಿತು.

ಸೋಮವಾರ 24.1 ಓವರ್ ನಿಂದ ಶುರುವಾದ ಪಂದ್ಯದಲ್ಲಿ ಟೀಮ್ ಇಂಡಿಯಾ ಕಿಂಗ್ ಕೊಹ್ಲಿ 84 ಎಸೆತಗಳಲ್ಲಿ ಶತಕ ಪೂರೈಸಿದರೆ, ಕೆಎಲ್ ರಾಹುಲ್ 100 ಎಸೆತಗಳಲ್ಲಿ ಸೆಂಚುರಿ ಸಿಡಿಸಿದರು. 

ವಿರಾಟ್ ಕೊಹ್ಲಿ 94 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 9 ಫೋರ್ ಗಳೊಂದಿಗೆ ಅಜೇಯ 122 ರನ್ ಗಳಿಸಿದರು . 106 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 12 ಫೋರ್ ಗಳೊಂದಿಗೆ ಕೆ ಎಲ್ ರಾಹುಲ್ ಅಜೇಯ 111 ರನ್ ಬಾರಿಸಿದರು.

50 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಟೀಮ್ ಇಂಡಿಯಾ ಮೊತ್ತ 356 ರನ್ ಗೆ ಗಳಿಸಿತ್ತು.

357 ರನ್ ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಜಸ್ಪ್ರೀತ್ ಬುಮ್ರಾ 5ನೇ ಓವರ್ ನಲ್ಲಿ ಇಮಾಮ್ ಉಲ್ ಹಕ್ (6) ವಿಕೆಟ್ ಪಡೆದರು , ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಬಾಬರ್ ಆಝಂ (10) ಕ್ಲೀನ್ ಬೌಲ್ಡ್ ಆದರು. ಇನ್ನು ಮೊಹಮ್ಮದ್ ರಿಝ್ವಾನ್ 2 ರನ್ ಗಳಿಸಿ ಶಾರ್ದೂಲ್ ಠಾಕೂರ್ ಗೆ ವಿಕೆಟ್ ಒಪ್ಪಿಸಿದರು.

ಕುಲ್ದೀಪ್ ಯಾದವ್ ಫಖರ್ ಝಮಾನ್ (27) , ಸಲ್ಮಾನ್ ಆಘಾ (23) ,ಇಫ್ತಿಕರ್ ಅಹ್ಮದ್ (23), ಶಾದಾಬ್ ಖಾನ್ (6) ಹಾಗೂ ಫಹೀಮ್ ಅಶ್ರಫ್ ಕುಲ್ದೀಪ್ ಯಾದವ್ 5 ವಿಕೆಟ್ ಗಳ ಸಾಧನೆ ಮಾಡಿದರು ಪಾಕಿಸ್ತಾನ್ ತಂಡವು 128 ರನ್ ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಟೀಮ್ ಇಂಡಿಯಾ 228 ರನ್ ಗಳ  ಗೆಲುವು ದಾಖಲಿಸಿತು.

ಹಿಂದಿನ ಲೇಖನಕೇರ್ಗಳ್ಳಿ: ವ್ಯಕ್ತಿಯ ಕತ್ತು ಕೊಯ್ದು ಕೊಲೆ
ಮುಂದಿನ ಲೇಖನನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು: ಇಬ್ಬರಿಗೆ ಗಾಯ