ಮನೆ ರಾಜಕೀಯ ಬಿಜೆಪಿಯ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಮತ ಕೇಳಿ:  ಜೆ.ಪಿ.ನಡ್ಡಾ

ಬಿಜೆಪಿಯ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಮತ ಕೇಳಿ:  ಜೆ.ಪಿ.ನಡ್ಡಾ

0

ಕೊಪ್ಪಳ(Koppala): ಸೇವಾ ಮನೋಭಾವನೆಯಿಂದ ಸಕಾರಾತ್ಮಕವಾಗಿ ನಮ್ಮ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಮತ ಕೇಳಬೇಕು  ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು.

ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಸೇರಿದ್ದ ಸಾವಿರಾರು ಜನರನ್ನು ಹುರಿದುಂಬಿಸಿ ಮಾತನಾಡಿದರು.

ಬಡವರು, ರೈತರು, ದೀನದಲಿತರು ಹೀಗೆ ಎಲ್ಲಾ ವರ್ಗದವರ ಏಳಿಗೆಗೆ ನಮ್ಮ ಸರ್ಕಾರ ಜಾರಿಗೆ ತಂದ ಯೋಜನೆಗಳು ಜನರ ಮುಂದಿಡಬೇಕು. ಪ್ರಧಾನಿ ನರೇಂದ್ರ ಮೋದಿ, ಬಿ.ಎಸ್‌. ಯಡಿಯೂರಪ್ಪ ಮಾಡಿದ ಕೆಲಸಗಳು ಮತ್ತು ಈಗ ಬಸವರಾಜ ಬೊಮ್ಮಾಯಿ ಅವರು ಜಾರಿಗೆ ತಂದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಮುಟ್ಟಿಸಬೇಕು. ಜನರ ಹಿಂದೆ ಹೋಗಬೇಕು ಎಂದು ಕರೆ ನೀಡಿದರು.

ಆಂಜನೇಯ ಜನಿಸಿದ ಪುಣ್ಯಭೂಮಿಯಿಂದ ಮಾತನಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಮಾತು ಆರಂಭಿಸಿದ ನಡ್ಡಾ, ಈ ಬಾರಿ ಬಿಜೆಪಿಯನ್ನು ಗೆಲ್ಲಿಸುತ್ತಿರಲ್ಲವೇ ಎಂದು ಪ್ರಶ್ನಿಸಿದರು.

ಎಲ್ಲ ಧರ್ಮಗಳನ್ನು ಸಮಾನವಾಗಿ, ಎಲ್ಲ ಸಮಾಜಗಳನ್ನು ಜೊತೆಗೆ ಕರೆದುಕೊಂಡು ಹೋಗುವ ಗುರಿಯನ್ನು ಬಿಜೆಪಿ ಹೊಂದಿದೆ. ರಾಮಜನ್ಮ ಭೂಮಿಯಲ್ಲಿ ಮಂದಿರ ನಿರ್ಮಾಣದ ಸಂಕಲ್ಪವನ್ನು ನನಸು ಮಾಡುತ್ತಿದ್ದೇವೆ. ಆಡಳಿತದಲ್ಲಿ ಪಾರದರ್ಶಕತೆಗೆ ಒತ್ತು ಕೊಟ್ಟಿದ್ದೇವೆ ಎಂದರು.

ಹಿಂದಿನ ಲೇಖನಮೈಸೂರು: ಹಿಂದುಳಿದ  ವರ್ಗ 2A ಮತ್ತು ಪ್ರವರ್ಗ-1ರ  ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ
ಮುಂದಿನ ಲೇಖನಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಡಿ.19 ರಂದು ಮಂಡ್ಯ ಬಂದ್