ಮನೆ ರಾಜ್ಯ ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಸ್ಪತ್ರೆಯ ಸಿಬ್ಬಂದಿಗಳ ಪಟ್ಟು

ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಸ್ಪತ್ರೆಯ ಸಿಬ್ಬಂದಿಗಳ ಪಟ್ಟು

0

ಸೇಡಂ: ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರೊಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದ್ದು, ಅವರನ್ನು ಬಂಧಿಸುವಂತೆ ಆಗ್ರಹಿಸಿ ಆಸ್ಪತ್ರೆಯ ಸಿಬ್ಬಂದಿಗಳು ಪಟ್ಟು ಹಿಡಿದಿದ್ದಾರೆ.

Join Our Whatsapp Group

ಘಟನೆಯ ವಿವರ: ಜು. 23ರ ಮಂಗಳವಾರ ರಾತ್ರಿ (ನಿನ್ನೆ) ಸೇಡಂನ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಗಾಯಾಳುವಿಗೆ ಡಾ. ಗೌತಮ್ ಚಿಕಿತ್ಸೆ ನೀಡುತ್ತಿದ್ದರು. ಈ ವೇಳೆ ಆಸ್ಪತ್ರೆಗೆ ಬಂದ ಇಬ್ಬರು ಮೊದಲು ತಮ್ಮ ಹುಡುಗನಿಗೆ ಚಿಕಿತ್ಸೆ ನೀಡುವಂತೆ ಸಿಬ್ಬಂದಿಗೆ ಒತ್ತಾಯಿಸಿದ್ದಾರೆ.

ಆಗ ವೈದ್ಯರು, ಈಗ ಬೇರೆ ಗಾಯಾಳುವಿಗೆ ಚಿಕಿತ್ಸೆ ಮಾಡುತ್ತಿದ್ದು ನಂತರ ನಿಮ್ಮ ಹುಡುಗನಿಗೆ ಚಿಕಿತ್ಸೆ ಮಾಡುತ್ತೇನೆ ಎಂದು ಉತ್ತರಿಸಿದರು. ಇದರಿಂದ ಕೋಪಗೊಂಡ ಅವರು ವೈದ್ಯರ ಕೋಣೆಗೆ ತೆರಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಆಗ ಅಲ್ಲಿನ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿದಾಗ ಅಲ್ಲಿಂದ ಓಡಿ ಹೋಗಿದ್ದಾರೆ. ಪೊಲೀಸರು ಆಸ್ಪತ್ರೆಯಿಂದ ತೆರಳಿದ ಮೇಲೆ ಮತ್ತೆ ಆಸ್ಪತ್ರೆಗೆ ಬಂದು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಸಿಬ್ಬಂದಿಗಳು ವೈದ್ಯರನ್ನು ಅವರಿಂದ ರಕ್ಷಿಸಿದ್ದಾರೆ.

ವೈದ್ಯರ ಮೇಲೆ ಹಲ್ಲೆ ಖಂಡಿಸಿ ಆಸ್ಪತ್ರೆ ಸಿಬ್ಬಂದಿಗಳ ಧರಣಿ:

ಜು. 23ರ ಮಂಗಳವಾರ ರಾತ್ರಿ ನಡೆದ ವೈದ್ಯರ ಮೇಲಿನ ಹಲ್ಲೆ ಖಂಡಿಸಿ, ಆ ವ್ಯಕ್ತಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜು.24ರ ಬುಧವಾರ ಬೆಳಿಗ್ಗೆಯಿಂದ ಆಸ್ಪತ್ರೆಯ ಸಿಬ್ಬಂದಿಗಳು ಕಪ್ಪು ಬಟ್ಟೆ ಕಟ್ಟಿಕೊಂಡು ಕರ್ತವ್ಯಕ್ಕೆ ಹಾಜರಾಗದೆ ಧರಣಿ ನಡೆಸಿದರು.