ಮುಂಬೈ(Mumbai): ಮತಗಟ್ಟೆ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಪ್ರಕರಣದಲ್ಲಿ ಬಾಲಿವುಡ್ ನಟ ಹಾಗೂ ಮಾಜಿ ರಾಜ್ಯ ಸಭಾ ಸದಸ್ಯ, ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಅವರಿಗೆ ಇಲ್ಲಿನ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಮೇ ೧೯೯೬ ರಲ್ಲಿ ಚುನಾವಣೆಯ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿ ಬಬ್ಬರ್ ವಿರುದ್ಧ ವಜೀರಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧವಾಗಿ ಕೋರ್ಟ್ ವಿಚಾರಣೆ ನಡೆಸಿದ ಬಳಿಕ ನಟ ರಾಜ್ ಬಬ್ಬರ್ಗೆ ಶಿಕ್ಷೆ ವಿಧಿಸಲಾಗಿದೆ.
ಸಾರ್ವಜನಿಕ ಸೇವೆಯಲ್ಲಿರುವ ವ್ಯಕ್ತಿಯನ್ನು ತನ್ನ ಕರ್ತವ್ಯವನ್ನು ನಿರ್ವಹಿಸದಂತೆ ತಡೆಯಲು ಮತ್ತು ಇತರ ಮೂರು ಅಪರಾಧಗಳ ಆರೋಪ ರಾಜ್ ಬಬ್ಬರ್ ಮೇಲಿದ್ದು, ಈಗ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ನ್ಯಾಯಾಲಯವು ನಟನಿಗೆ ೮,೫೦೦ ರೂಪಾಯಿ ದಂಡವನ್ನೂ ವಿಧಿಸಿದೆ.