ಮನೆ ಅಪರಾಧ ಸಾಮಾಜಿಕ ಕಾರ್ಯಕರ್ತ ಜಯಂತ್ ತಿನೇಕರ್ ಮೇಲೆ ಹಲ್ಲೆ

ಸಾಮಾಜಿಕ ಕಾರ್ಯಕರ್ತ ಜಯಂತ್ ತಿನೇಕರ್ ಮೇಲೆ ಹಲ್ಲೆ

0

ಬೆಳಗಾವಿ: ಖಾನಾಪುರದ ಸಾಮಾಜಿಕ ಕಾರ್ಯಕರ್ತ ಜಯಂತ್ ಮುಕುಂದ್ ತಿನೇಕರ್ (62) ಎಂಬುವರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಏಳೆಂಟು ಜನರ ಗುಂಪೊಂದು ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿ ಪರಾರಿ ಆಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಜಯಂತ್​ ಅವರನ್ನು ಬೆಳಗಾವಿ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿ ತಾಲೂಕಿನ ಖಾನಾಪುರ – ಬೆಳಗಾವಿ ಹೆದ್ದಾರಿಯ ಝಾಡ್ ಶಹಾಪುರ ಬಳಿ ಹಿಂಬಾಲಿಸಿಕೊಂಡು ಬಂದ ಮುಸುಕುದಾರಿಗಳು ಕಾರು ತಡೆದು ಕಬ್ಬಿಣದ ರಾಡ್​ಗಳಿಂದ ಥಳಿಸಿದ್ದಾರೆ. ಈ ವೇಳೆ, ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಕೆಲ ಲಾರಿ ಚಾಲಕರು ಸಹಾಯಕ್ಕೆ ಧಾವಿಸಿದ್ದರಿಂದ ಹೆಚ್ಚಿನ ಅಪಘಾತ ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ

ಹಲ್ಲೆ ಮಾಡಿದ ಆರೋಪಿಗಳು ಅಪರಿಚಿತರಾಗಿದ್ದು, ಮುಖಕ್ಕೆ ಸ್ಕಾರ್ಫ್ ಹಾಕಿಕೊಂಡಿದ್ದರು. ಹೊಡೆತದ ವೇಳೆ ಜಯಂತ್​ ತಿನೇಕರ್ ಅವರ ಬಲ ಮೊಣಕಾಲು ಮುರಿದಿದ್ದು, ಬಲ ಭುಜದ ಬಳಿಯೂ ಗಂಭೀರ ಗಾಯವಾಗಿದೆ. ಖಾನಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬೆಳಗಾವಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಬಿಬಿಎಂಪಿ ಆಯುಕ್ತ ಗುಪ್ತಾ ಅಫಿಡವಿಟ್‌ ಸಲ್ಲಿಕೆ ನಂತರ ಕರುಣೆ ತೋರಬೇಕೆ, ಬೇಡವೇ ಎಂದು ನಿರ್ಧಾರ: ಹೈಕೋರ್ಟ್‌
ಮುಂದಿನ ಲೇಖನಮಾ.9 ರಿಂದ ಮೇಲುಕೋಟೆ ವೈರಮುಡಿ‌ ಉತ್ಸವ