ಬೆಂಗಳೂರು: ವಿಧಾನಸಭೆ ಚುನಾವಣೆ ಅಧಿಸೂಚನೆಗೆ ದಿನಗಣನೆ ಆರಂಭವಾಗಿದ್ದು, ಪ್ರಮುಖ ಮೂರು ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಕೊನೆ ಕ್ಷಣದ ಕಸರತ್ತು ಬಿರುಸುಗೊಂಡಿದೆ.
ಸ್ಯಾಂಡಲ್ ವುಡ್ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ . ನಟರಿಬ್ಬರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸುದೀಪ್ ಮತ್ತು ದರ್ಶನ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರ ಮುಖಂಡರು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ.
ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.
Saval TV on YouTube