ಹೊಸದಿಲ್ಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಸುಮಾರು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಸೋಮವಾರ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದರು.
ಪಟ್ಟಿಯನ್ನು ಅಂತಿಮಗೊಳಿಸಲು ಇಂದು ಇನ್ನೂ ಒಂದು ಸಭೆ ಇದೆ, ಇಂದು ಸಂಜೆಯೊಳಗೆ ಬಿಡುಗಡೆ ಮಾಡುವ ವಿಶ್ವಾಸವಿದೆ. ಮೊದಲ ಪಟ್ಟಿಯಲ್ಲಿ 170 ರಿಂದ 180 ಹೆಸರುಗಳನ್ನು ಪ್ರಕಟಿಸಲಾಗುವುದು ಎಂದರು.
Saval TV on YouTube