ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಿಂದ ದರ್ಶನ್ ಕುಟುಂಬ ದುಃಖಕ್ಕೆ ಒಳಗಾಗಿದೆ. ವಿಜಯಲಕ್ಷ್ಮಿ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಇಂದು (ಜುಲೈ 24) ಬೆಳಿಗ್ಗೆ ದರ್ಶನ್ ಸಹೋದರ ದಿನಕರ್ ತೂಗುದೀಪ್ ಹಾಗೂ ವಿಜಯಲಕ್ಷ್ಮಿ ಅವರು ಬೆಂಗಳೂರಿನ ಸದಾಶಿವ ನಗರದಲ್ಲಿ ಇರುವ ಡಿಕೆಶಿ ಮನೆಗೆ ತೆರಳಿದ್ದಾರೆ. ಈ ಭೇಟಿ ವೇಳೆ ಅನೇಕ ರೀತಿಯ ಚರ್ಚೆಗಳು ನಡೆದಿವೆ.
ರಾಮನಗರದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್ ಅವರು, ವಿಜಯಲಕ್ಷ್ಮಿ ಭೇಟಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ‘ದರ್ಶನ್ ಪತ್ನಿ ಭೇಟಿಗೆ ಅವಕಾಶ ಕೇಳಿದ್ದಾರೆ. ಬುಧವಾರ (ಜುಲೈ 24) ಅವರನ್ನು ಭೇಟಿ ಮಾಡುತ್ತೇನೆ’ ಎಂದು ಡಿಕೆಶಿ ಹೇಳಿದ್ದರು. ಅದೇ ರೀತಿ ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಸಹೋದರ ದಿನಕರ್ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ಅವರು ಇಂದು ಡಿಕೆಶಿ ಮನೆಗೆ ತೆರಳಿದ್ದಾರೆ.
ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆದಿದೆ. ದರ್ಶನ್ ಪ್ರಕರಣದ ಕುರಿತು ಕೆಲಕಾಲ ಚರ್ಚೆಗಳು ನಡೆದಿವೆ. ಕಾನೂನು ಚೌಕಟ್ಟಿನಲ್ಲಿ ಸಹಾಯ ಮಾಡಲು ವಿಜಯಲಕ್ಷ್ಮೀ ಮನವಿ ಮಾಡಿಕೊಂಡಿದ್ದಾರೆ.
ದರ್ಶನ್ ಜೈಲಿಗೆ ಹೋಗಿ ತಿಂಗಳಾಗಿದೆ, ಇನ್ನೂ ಬೇಲ್ ಸಿಕ್ಕಿಲ್ಲ. ಕಾನೂನಿ ಅಡಿಯಲ್ಲಿ ಏನಾದರೂ ಸಹಾಯ ಮಾಡಿ ಎಂದು ಡಿಕೆಶಿ ಬಳಿ ವಿಜಯಲಕ್ಷ್ಮೀ ಮನವಿ ಮಾಡಿಕೊಂಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅರೆಸ್ಟ್ ಆಗಿದ್ದಾರೆ. ಅವರು ಕಳೆದ ಒಂದೂವರೆ ತಿಂಗಳಿಂದ ಜೈಲಿನಲ್ಲಿ ಇದ್ದಾರೆ. ಆರಂಭದಲ್ಲಿ ಕೆಲ ದಿನ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಅವರು ನಂತರ ನ್ಯಾಯಾಂಗ ಬಂಧನಕ್ಕೆ ಒಳಗಾದರು. ಆಗಸ್ಟ್ ಎರಡನೇ ವಾರದಲ್ಲಿ ಪೊಲೀಸರು ಪ್ರಾಥಮಿಕ ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದ್ದಾರೆ.