ಮನೆ ಸ್ಥಳೀಯ ಕ್ರೀಡಾಪಟುಗಳು ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಇತಿಹಾಸ ನಿರ್ಮಿಸಿ: ತನ್ವೀರ್ ಸೇಠ್

ಕ್ರೀಡಾಪಟುಗಳು ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಇತಿಹಾಸ ನಿರ್ಮಿಸಿ: ತನ್ವೀರ್ ಸೇಠ್

0

ಮೈಸೂರು: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಅಭ್ಯರ್ಥಿಗಳು ಉತ್ತಮ ಕ್ರೀಡಾಪಟುಗಳಾಗಿ ಅಂತರಾಷ್ಟ್ರೀಯ  ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಇತಿಹಾಸವನ್ನು ನಿರ್ಮಿಸಬೇಕು ಶಾಸಕರಾದ ತನ್ವೀರ್ ಸೇಠ್ ತಿಳಿಸಿದರು.

Join Our Whatsapp Group

ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿ, ದಸರಾ ಸಂದರ್ಭದಲ್ಲಿ ದಸರಾ ಕ್ರೀಡಾ ಕೂಟವನ್ನು ನಡೆಸುವುದು ನಡೆದು ಬಂದ ಪದ್ಧತಿಯಾಗಿದೆ. ಅದೇ ರೀತಿಯಲ್ಲಿ ಈ ವರ್ಷವೂ ಕೂಡ ಹಮ್ಮಿಕೊಂಡಿದ್ದೇವೆ. ಕ್ರೀಡೆಗಳಲ್ಲಿ ಪಾಲ್ಗೊಂಡು ನಿಮ್ಮಲ್ಲಿನ ಪ್ರತಿಭೆಗೆ ತಕ್ಕ ಪ್ರತಿಫಲವನ್ನು ಪಡೆಯಿರಿ ಎಂದು ಕ್ರೀಡಾ ಪಟುಗಳಿಗೆ ಶುಭಾಶಯ ತಿಳಿಸಿದರು.

ವಿದ್ಯಾರ್ಥಿಗಳು ನಿಮ್ಮ ವಯೋಮಿತಿಯಲ್ಲಿ ಅಧ್ಯಯನದ ವಿಚಾರಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಉತ್ತಮವಾದ ವಿಚಾರಗಳನ್ನು ಆಯ್ಕೆ ಮಾಡಿಕೊಳ್ಳಿ. ನೀವು ಆಯ್ಕೆ ಮಾಡಿಕೊಳ್ಳುವ ವಿಚಾರಗಳಿಗೆ ಬೆಂಬಲ ನೀಡುವುದು ಸರ್ಕಾರದ ಕರ್ತವ್ಯವಾಗಿರುತ್ತದೆ. ಇಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗ ವಹಿಸಿರುವವರು ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ದಸರಾ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿ ಜಯಗಳಿಸಬೇಕು. ಮುಂದಿನ ದಿನಗಳಲ್ಲಿ ಕ್ರೀಡೆ ಚಟುವಟಿಕೆಗಳು ಉತ್ತಮ ಸಾಧನೆ ಮಾಡಿ ಮೈಸೂರು ಜಿಲ್ಲೆಗೆ ಹಿರಿಮೆ ತರುವ ನಿಟ್ಟಿನಲಿ ಸಾಗಬೇಕು ಎಂದರು.

ದಸರಾ ಕ್ರೀಡಾ ಕೂಟದಲ್ಲಿ ಭಾಗವಹಿಸಿರುವ ಮಕ್ಕಳು ನಿಮ್ಮ ಗುರುಗಳಿಗೆ, ನಿಮ್ಮ ಪೋಷಕರು ಹೆಮ್ಮೆ ಪಡುವಂತೆ ಸಾಧನೆಯನ್ನು ಮಾಡಬೇಕು. ನಿಮ್ಮ ಪೋಷಕರು ನಿಮಗಾಗಿ ಕಟ್ಟಿರುವ ಕನಸುಗಳನ್ನು ನನಸು ಮಾಡುವ ಕಡೆ ನಿಮ್ಮ ಗುರಿ ಇರಬೇಕು ಎಂದು ತಿಳಿಸಿದರು.

ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಸಿ.ಎನ್ ಮಂಜೇಗೌಡ ಅವರು ಮಾತನಾಡಿ ಕ್ರೀಡಾ ಕೂಟದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳನ್ನು ನೋಡಿದರೆ ನಮ್ಮ ಬಾಲ್ಯದ ನೆನಪುಗಳು ಬರುತ್ತವೆ. ನೀವು ಯಾವುದೇ ಕ್ರೀಡೆಯಲ್ಲಿ ಭಾಗವಹಿಸಿದರು ನಿಮ್ಮ ರೀತಿಯಲ್ಲಿ ಭಾಗವಹಿಸಿ. ಯಾರನ್ನು ನೋಡಿ ಅವರಂತೆ ಆಗಲಿಲ್ಲ ಎಂದು ನೊಂದುಕೊಳ್ಳಬೇಡಿ. ನಿಮ್ಮಲ್ಲಿನ ಕೌಶಲ್ಯವನ್ನು ಹೊರ ಜಗತ್ತಿಗೆ ತಿಳಿಸಿ. ಕ್ರೀಡಾ ಪಟುಗಳು ದೇಶದ ಕೀರ್ತಿ ಪತಾಕೆಯನ್ನು ಹಾರಿಸುವವರು. ಕ್ರೀಡಾಪಟುಗಳಿಗೆ ಆ ಶಕ್ತಿಯಿದೆ.

 ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ಕ್ರೀಡೆಗಳಲ್ಲಿ ಪಾಲ್ಗೊಂಡು ದೇಶಕ್ಕೆ ಒಳ್ಳೆಯ ಕ್ರೀಡಾಪಟುಗಳಾಗಬೇಕು. ಒಬ್ಬ ಒಳ್ಳೆ ಕ್ರೀಡಾಪಟುವಾದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಕೂಡ ಗುರುತಿಸಿಕೊಳ್ಳುವ ಅವಕಾಶ ಇದೆ. ಪ್ರತಿಯೊಬ್ಬರೂ ಕೂಡ ಕ್ರೀಡೆಗಳಲ್ಲಿ ಪಾಲ್ಗೊಂಡು ಉತ್ತಮ ಜೀವನ ನಡೆಸಿ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ ಅವರು ಮಾತನಾಡಿ ಪ್ರತಿಯೊಬ್ಬ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಮಾಡಬೇಕು. ಉತ್ತಮ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ನಿಮ್ಮ ಪ್ರತಿಭೆಗೆ ತಕ್ಕ ಪ್ರತಿಫಲವನ್ನು ಪಡೆಯಬೇಕು ಎಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗಹಿಸಿರುವ ಕ್ರೀಡಾಪಟುಗಳಿಗೆ ಶುಭಾಶಯ ತಿಳಿಸಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಭಾಸ್ಕರ ನಾಯಕ್ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿವಿಧ ತಾಲೂಕುಗಳ ಕ್ರೀಡಾ ಪಟುಗಳು ಮತ್ತು ತರಬೇತುದಾರರು ಪಾಲ್ಗೊಂಡಿದ್ದರು.

ಹಿಂದಿನ ಲೇಖನಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಣ್ಣ ನೀರಾವರಿ ಯೋಜನೆಗಳ ಕಾಮಗಾರಿ ಚುರುಕುಗೊಳಿಸಿ: ಎನ್ ಎಸ್ ಭೋಸರಾಜು ಸೂಚನೆ
ಮುಂದಿನ ಲೇಖನಮಾದಕ ವಸ್ತುಗಳ ಮಾರಾಟ, ಸೇವನೆ ತಡೆಗಟ್ಟಲು ಸಮುದಾಯದ ಸಹಕಾರ ಅಗತ್ಯ: ಕೆ.ವಿ ಶ್ರೀಧರ್