ಮನೆ ರಾಜ್ಯ ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಯತ್ನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಯತ್ನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0

ಉಡುಪಿ : ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಪ್ರಯತ್ನಗಳಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು.

ಉಡುಪಿ ಜಿಲ್ಲೆಯ ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ ಸಮಾಜದ ಕೋಮು ಸೌಹಾರ್ದತೆಯನ್ನು ಕೆಡಿಸುತ್ತಿದ್ದಾರೆ ಎಂದರು.

ಸರ್ಕಾರದ ವಿರುದ್ಧ ಆರೋಪ ಮಾಡಲು ವಿಪಕ್ಷಗಳಿಗೆ ಬೇರೆ ವಿಚಾರ ಇಲ್ಲ. ರಾಜ್ಯ ಸರ್ಕಾರ ಬೀಳುತ್ತದೆ, ಗ್ಯಾರಂಟಿ ಯೋಜನೆಗಳು ಜಾರಿ ಆಗಲ್ಲ, ಒಂದು ವೇಳೆ ಜಾರಿಯಾದರೂ ನಾಲ್ಕು ತಿಂಗಳಿಗೆ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಅಪಪ್ರಚಾರ ಮಾಡಲಾಯಿತು. ರಾಜ್ಯದ ಜನತೆಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.