ಮನೆ ರಾಷ್ಟ್ರೀಯ ಅಕ್ರಮವಾಗಿ ಗಡಿ ನುಸುಳಲು ಯತ್ನ – ಉಗ್ರರ ಎನ್‌ಕೌಂಟರ್

ಅಕ್ರಮವಾಗಿ ಗಡಿ ನುಸುಳಲು ಯತ್ನ – ಉಗ್ರರ ಎನ್‌ಕೌಂಟರ್

0

ಶ್ರೀನಗರ : ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಎನ್‌ಕೌಂಟರ್‌ ಮಾಡಿದೆ. ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಈ ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಭಯೋತ್ಪಾದನಾ ನಿಗ್ರಹ ದಳದಿಂದ ಕಾರ್ಯಾಚರಣೆ ಮುಂದುವರಿದಿದೆ.