ಮಂಗಳೂರು(ದಕ್ಷಿಣ ಕನ್ನಡ): ಬೆಳ್ತಂಗಡಿಯಲ್ಲಿ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಬಿಜೆಪಿ ಮುಖಂಡ ರಾಜೇಶ್ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.
ಗಲಾಟೆಯ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್.ಎಮ್.ಕೆ. ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ