ಮನೆ ಅಪರಾಧ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಪುಡಿರೌಡಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಪುಡಿರೌಡಿ ಕಾಲಿಗೆ ಗುಂಡೇಟು

0

ಹಾಸನ: ಖಾಸಗಿ ಬಸ್ ಅಡ್ಡಗಟ್ಟಿ ತಲವಾರಿನಿಂದ ದಾಳಿ ಮಾಡಿ ಅಟ್ಟಹಾಸ ಮೆರೆದಿದ್ದಲ್ಲದೇ ಬಂಧಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ರೌಡಿಶೀಟರ್​ ಕಾಲಿಗೆ ಗುಂಡು ಹಾರಿಸಿ, ಪೊಲೀಸರು ಬಂಧಿಸಿದ ಘಟನೆ ಹಾಸನದಲ್ಲಿ ಗುರುವಾರ ನಡೆದಿದೆ.

Join Our Whatsapp Group

ಮನು ಬಂಧಿತ ಆರೋಪಿ.

ಈತ ಬುಧವಾರ ಮಧ್ಯರಾತ್ರಿ ಬಸ್ ಅಡ್ಡಗಟ್ಟಿ ಅದರ ಗಾಜನ್ನು ಲಾಂಗ್​  ನಿಂದ ಒಡೆದು ಹಾಕಿದ್ದ. ಬಸ್ ಪ್ರಯಾಣಿಕರು ಆತನನ್ನು ಹಿಡಿಯಲು ಮುಂದಾದಾಗ ಕಾರು ಹತ್ತಿ ಪರಾರಿಯಾಗಿದ್ದ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಮಾಹಿತಿ ತಿಳಿದು ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.

ಆರೋಪಿಯ ಚಲನವಲನ ಗಮನಿಸಿದ ಪೊಲೀಸರು, ಮಂಗಳೂರು ಕಡೆಯಿಂದ ಬೆಂಗಳೂರಿನೆಡೆಗೆ ವಾಪಸ್ ಆಗುತ್ತಿದ್ದಾಗ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ಟೋಲ್ ಗೇಟ್ ಸಮೀಪ ಆತನನ್ನು ಸುತ್ತುವರಿದಿದ್ದಾರೆ. ಈ ವೇಳೆ ಆರೋಪಿ ಕಾರಿನಲ್ಲಿದ್ದ ಲಾಂಗ್ ತೆಗೆದು ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದ. ಪ್ರಾಣ ರಕ್ಷಣೆಗೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಆರೋಪಿ ಮನು ಮೇಲೆ ಒಂದು ಕೊಲೆ ಪ್ರಕರಣ, ಮೂರು ಕೊಲೆ ಯತ್ನ ಹಾಗೂ ರಾತ್ರಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.