ಮನೆ ರಾಷ್ಟ್ರೀಯ ಭಾರತದಲ್ಲಿ ಪ್ರಜಾಪ್ರಭುತ್ವವನ್ನು ತುಳಿಯಲು ಪ್ರಯತ್ನಿಸಲಾಗಿತ್ತು: ಪ್ರಧಾನಿ ಮೋದಿ

ಭಾರತದಲ್ಲಿ ಪ್ರಜಾಪ್ರಭುತ್ವವನ್ನು ತುಳಿಯಲು ಪ್ರಯತ್ನಿಸಲಾಗಿತ್ತು: ಪ್ರಧಾನಿ ಮೋದಿ

0

ನವದೆಹಲಿ (New Delhi): ಭಾರತದಲ್ಲಿ ಪ್ರಜಾಪ್ರಭುತ್ವವನ್ನು ತುಳಿದು ಹಾಕಲು ಪ್ರಯತ್ನಿಸಲಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇಂದು ಮನ್‌ ಕಿ ಬಾತ್‌ ರೇಡಿಯೊ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರವು ತುರ್ತು ಪರಿಸ್ಥಿತಿ ಹೇರಿದ್ದನ್ನು ಪ್ರಸ್ತಾಪಿಸಿದರು.

ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ 1975ರ ಜೂನ್‌ 25ರಂದು ತುರ್ತು ಪರಿಸ್ಥಿತಿ ಘೋಷಿಸಲಾಯಿತು. ಅದನ್ನು 1977ರ ಮಾರ್ಚ್‌ 21ರಂದು ಅಂತ್ಯಗೊಳಿಸಲಾಗಿತ್ತು.

ತುರ್ತು ಪರಿಸ್ಥಿತಿಯ ಸಮಯದಲ್ಲಿ ಎಲ್ಲ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು. ದಬ್ಬಾಳಿಕೆ ಮನಸ್ಥಿತಿಯನ್ನು ಪ್ರಜಾಸತ್ತಾತ್ಮಕವಾಗಿ ಮಣಿಸಿದ ಮತ್ತೊಂದು ಉದಾಹರಣೆಯು ಜಗತ್ತಿನ ಬೇರೆಲ್ಲೂ ಹುಡುಕುವುದು ಕಷ್ಟ ಎಂದರು.

ಸಾವಿರಾರು ಜನರನ್ನು ಬಂಧಿಸಲಾಯಿತು ಹಾಗೂ ಲಕ್ಷಾಂತರ ಜನರ ಮೇಲೆ ದೌರ್ಜನ್ಯ ನಡೆಸಲಾಯಿತು. ಆದರೆ, ಪ್ರಜಾಪ್ರಭುತ್ವದ ಮೇಲೆ ಜನರ ನಂಬಿಕೆಯನ್ನು ಅಲುಗಾಡಿಸಲು ಆಗಲಿಲ್ಲ. ಪ್ರಜಾಪ್ರಭುತ್ವದ ಚೈತನ್ಯವು ನಮ್ಮ ನರನಾಡಿಗಳಲ್ಲಿ ಹರಿದಿದೆ. ಪ್ರಜಾಪ್ರಭುತ್ವದ ಮೌಲ್ಯಗಳು ಶತಮಾನಗಳಿಂದ ನಮ್ಮೊಳಗೆ ಬೆರೆತು ಹೋಗಿವೆ. ಅಂತಿಮವಾಗಿ ಅದಕ್ಕೆ ಗೆಲುವಾಯಿತು ಎಂದು ಪ್ರಧಾನಿ ಮೋದಿ ಹೇಳಿದರು.

ಹಿಂದಿನ ಲೇಖನಬೆಳಗಾವಿಯಲ್ಲಿ ಭೀಕರ ಅಪಘಾತ: ಮೃತ ಕಾರ್ಮಿಕ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ
ಮುಂದಿನ ಲೇಖನಶಿವಸೇನಾದ 15 ಮಂದಿ ಬಂಡಾಯ ಶಾಸಕರಿಗೆ ಕೇಂದ್ರದಿಂದ ʻವೈ+ʼ ಭದ್ರತೆ