ಮನೆ ಕಾನೂನು ಅತ್ತಿಬೆಲೆ ದುರಂತ ಪ್ರಕರಣ: ನಾಲ್ವರು ಅಧಿಕಾರಿಗಳ ಅಮಾನತು

ಅತ್ತಿಬೆಲೆ ದುರಂತ ಪ್ರಕರಣ: ನಾಲ್ವರು ಅಧಿಕಾರಿಗಳ ಅಮಾನತು

0

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದೆ. ಅಲ್ಲದೇ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಅತ್ತಿಬೆಲೆ ಅಗ್ನಿ ಅವಘಡಕ್ಕೆ ಅಧಿಕಾರಿಗಳೇ ಹೊಣೆ ಎಂದು ವರದಿ ಬಂದಿತ್ತು. ಪಟಾಕಿ ಅಂಗಡಿಗೆ 1ಸಾವಿರ ಕೆ.ಜಿ ಮಾತ್ರ ಸ್ಟಾಕ್ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಿಗೆ ನೀಡಿರುವ ಹಿನ್ನಲೆಯಲ್ಲಿ ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನ ಸೇವೆಯಿಂದ ಅಮಾನತು ಮಾಡಿ ಇಲಾಖೆ ತನಿಖೆಗೆ ಆದೇಶಿಸಲಾಗಿದೆ.

ಮಂಗಳವಾರ ಅಮಾನತಿನ ಬಗ್ಗೆ ಡಿಸಿ, ಎಸ್‍ ಪಿಗೆ ಸಿಎಂ ಸೂಚನೆ ನೀಡಿದ್ದರು. ಇದೀಗ ಸಿಎಂ ಸೂಚನೆ ಬೆನ್ನಲ್ಲೆ ಇದೀಗ ಡಿಇ ಕಾಯ್ದಿರಿಸಿ ಪಾರದರ್ಶಕವಾದ ವರದಿ ನೀಡದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.