ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ ಸಾಕ್ಷಿಗಳ ಅಡಿಯೋ ಹಾಗೂ ವಿಡಿಯೋ ರೆಕಾರ್ಡಿಂಗ್ ಹೇಳಿಕೆಗಳನ್ನು ಪರಿಗಣಿಸಬಹುದು ಎಂದು ಕರ್ನಾಟಕ ಸರ್ಕಾರಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್ (ಅವರಾಧ ಪ್ರಕ್ರಿಯಾ ಸಂಹಿತೆ – ಸಿಆರ್ ಪಿಸಿ)ಗೆತಂದಿರುವ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ಆರೋಪಿ ಹಾಗೂ ಆತನ ವಕೀಲರ ಸಮ್ಮುಖದಲ್ಲಿ ಸಾಕ್ಷಿಗಳ ಹೇಳಿಕೆಯನ್ನು ಆಡಿಯೋ ಹಾಗೂ ವಿಡಿಯೋ ರೂಪದಲ್ಲಿ ದಾಖಲಿಸಬಹುದು. ಇವುಗಳನ್ನು ಮುಂದಿನ ತನಿಖಾ ಹಾಗೂ ವಿಚಾರಣಾ ಪ್ರಕ್ರಿಯೆಗಳಲ್ಲಿ ಬಳಸಿಕೊಳ್ಳಬಹುದು ಎಂದು ಸಿಆರ್ ಪಿಸಿ ನಿಯಮಗಳಿಗೆ ತಿದ್ದುಪಡಿ ತರುವ ಮಸೂದೆಯನ್ನು ಕರ್ನಾಟಕದ ಶಾಸನ ಸಭೆ 2021ರಲ್ಲಿ ಅಂಗೀಕರಿಸಿತ್ತು. ಅದನ್ನು ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾ ಗಿತ್ತು. ಅದಕ್ಕೆ ರಾಷ್ಟ್ರಪತಿ ಬ್ರೌಪದಿ ಮುರ್ಮು ಸಹಿ ಹಾಕಿದ್ದಾರೆ.