ಪುತ್ತೂರು: ಸ್ಥಳೀಯ ಶಾಸಕರ ಕುರಿತ ಆಡಿಯೋ ಪ್ರಸಾರ ಸಂಬಂಧಿಸಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲು ಪುತ್ತೂರು ನಗರ ಪೊಲೀಸರಿಗೆ ಪುತ್ತೂರು ಪ್ರಿನ್ಸಿಪಲ್ ಸೀನಿಯರ್ ಸಿವಿಲ್ ನ್ಯಾಯಾಲಯ ನಿರ್ದೇಶನ ನೀಡಿದೆ.
ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಎಂಬಾತ ಶಾಸಕರ ಕುರಿತು ವಾಟ್ಸ್‌ಆ್ಯಪ್ ಮೂಲಕ ಆಡಿಯೋ ಬಿಡುಗಡೆ ಮಾಡಿದ್ದು, ಅದಕ್ಕೆ ಪ್ರತಿಯಾಗಿ ಬೇರೆ ಆಡಿಯೋ ಬಿಡುಗಡೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹಕೀಂ ಡಿ.25ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಸಂಬಂಧ ದೀಕ್ಷಿತ್ ರೈ ಮತ್ತು ಅದ್ದು ಪಡೀಲ್ ವಿರುದ್ಧ ಎಫ್.ಐ.ಆರ್. ದಾಖಲಿಸಿಕೊಳ್ಳಲು ಪೊಲೀಸರು ನ್ಯಾಯಾಲಯದ ಅನುಮತಿ ಕೇಳಿದ್ದರು.